ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕೊಡಗಿನ ಕುಟ್ಟ ಮೂಲದ ಉದ್ಯಮಿ

ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕೊಡಗಿನ ಕುಟ್ಟ ಮೂಲದ ಉದ್ಯಮಿ
ಸಜೀರ್

ಪೊನ್ನಂಪೇಟೆ ;ತಾಲೂಕಿನ ಕುಟ್ಟ ಗ್ರಾಮದ ಉದ್ಯಮಿಯೊಬ್ಬರು, ಕೇರಳದ ವಯನಾಡಿನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಕಿ ಹಚ್ಚಿಕೊಂಡಿದ್ದು, ಇವರ ಪೈಕಿ ಉದ್ಯಮಿ ಸಾವನ್ನಪ್ಪಿದ್ದರೆ, ಪತ್ನಿ ಹಾಗೂ ಮಕ್ಕಳು ಪಾರಾಗಿದ್ದಾರೆ. ಈ ದುರಂತದಲ್ಲಿ ಕುಟ್ಟ ಗ್ರಾಮದ ನಿವಾಸಿ, ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ.

 ಇವರ ಪತ್ನಿಗೆ ಗಂಭೀರ ಗಾಯವಾಗಿದ್ದು, ಕ್ಯಾಲಿಕೆಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಉದ್ಯಮಿ ಸಜೀರ್​​​, ಕುಟ್ಟ ಗ್ರಾಮದಲ್ಲಿ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಬಾಪು ಎಂಬಾತ ಸಜೀರ್​​ಗೆ 20 ಲಕ್ಷ ರೂ. ನೀಡಬೇಕಿತ್ತು. ಸಾಲ ಪಡೆದಿದ್ದ ಬಾಪುನ ಮನೆ ಎದುರೇ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಕಾರಿನಲ್ಲೇ ಕುಳಿತು ಉದ್ಯಮಿ ಸಜೀರ್​ ವಿಡಿಯೋ ರೆಕಾರ್ಡ್ ಮಾಡಿದ್ದು, ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಬಾಪು ಕಾರಣ ಎಂದು ಹೇಳಿದ್ದಾರೆ.