ಕಕ್ಕಬ್ಬೆ-ಕುಂಜಿಲ ಗ್ರಾಮದ ಅಂಬಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Jan 28, 2026 - 16:54
 0  224
ಕಕ್ಕಬ್ಬೆ-ಕುಂಜಿಲ ಗ್ರಾಮದ ಅಂಬಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು :ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ ಗ್ರಾಮದ ಅಂಬಲ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಶೈಲಾ ಅವರು ಧ್ವಜಾರೋಹಣ ನೆರವೇರಿಸಿದರು.

ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಪುಷ್ಪಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಗಣೇಶ್ ಹಾಗೂ ಶಾಲೆಯ ನಿವೃತ್ತ ಶಿಕ್ಷಕರಾದ ಪಾರ್ವತಿಯವರು ದಿನದ ಮಹತ್ವದ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ 2024 -25 ನೇ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು. ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ನೋಡುಗರ ಗಮನ ಸೆಳೆಯಿತು. ಈ ಸಂದರ್ಭ ಶಾಲೆಯ ಎಸ್ ಡಿ ಎಂ ಸಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು,ಸಹಾಯಕಿಯರು, ಶಾಲೆಯ ಸಿಬ್ಬಂದಿಗಳು, ಊರಿನ ಪ್ರಮುಖರು, ಪೋಷಕರು,ವಿದ್ಯಾರ್ಥಿಗಳು ಹಾಜರಿದ್ದರು. ಶಾಲೆಯ ಅತಿಥಿ ಶಿಕ್ಷಕಿ ರೋಸಿ ಸ್ವಾಗತಿಸಿ, ಸರ್ವರನ್ನು ವಂದಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0