ನವೆಂಬರ್ 01ರಂದು ಸೋಮವಾರಪೇಟೆ ಆಟೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ವಿಜೃಂಭಣೆಯ ಕನ್ನಡ ರಾಜ್ಯೋತ್ಸವ
ಸೋಮವಾರಪೇಟೆ:- ನವಂಬರ್ ಒಂದರಂದು ವಿಜೃಂಭಣೆಯ ಕನ್ನಡ ರಾಜ್ಯೋತ್ಸವ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಇಲ್ಲಿನ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಉಮೇಶ್ ತಿಳಿಸಿದ್ದಾರೆ.
ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದ ಅವರು ನಿರಂತರವಾಗಿ ಕನ್ನಡ ಧ್ವಜ ಹಾರಿಸುವ ಸಂಕಲ್ಪದಿಂದ ನೂತನ ಧ್ವಜ ಸ್ತಂಭ ನಿರ್ಮಿಸಲಾಗುತಿದ್ದು ರಾಜ್ಯೋತ್ಸವದ ದಿನದಂದು ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಮಹಮದ್ ಶಾಫಿ ಮಾತನಾಡಿ ನವಂಬರ್ ಒಂದರ ಶನಿವಾರ ಬೆಳಿಗ್ಗೆ 8 ಗಂಟೆಗೆ ಪಟ್ಟಣದ ಕಕ್ಕೆಹೊಳೆ ಸಮೀಪವಿರುವ ಬಸವೇಶ್ವರ ವೃತ್ತದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮೂಲಕ ಅಂದಿನ ಕಾರ್ಯಕ್ರಮಕ್ಕೆ ಚಾಲನೆನೀಡಿ ನಂತರ ಪಟ್ಟಣದ ಎಲ್ಲಾ ಪ್ರತಿಮೆಗಳಿಗೂ ಮಾಲಾರ್ಪಣೆ ಮಾಡಿ ನಂತರ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವುದೆಂದರು.
10ಗಂಟೆಗೆ ಖಾಸಗಿ ಬಸ್ ನಿಲ್ದಾಣದಲ್ಲಿ ನಿರ್ಮಿಸುವ ಭವ್ಯ ವೇದಿಕೆಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ ನಂತರ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಕುಣಿಯೋಣು ಬಾರ ಎಂಬ ನೃತ್ಯ ಸ್ಪರ್ಡೆನಡೆಯಲಿದೆ ಎಂದು ತಿಳಿಸಿದರು.
ಮದ್ಯಾಹ್ನ 1ಗಂಟೆಗೆ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಲಿದೆ.ಸಂಜೆ 5.30 ಕ್ಕೆ ಸಮಾರೋಪ ನಡೆಯಲಿದ್ದು ಆ ನಂತರ ರಾಜ್ಯಮಟ್ಟದ ಮುಕ್ತ ನೃತ್ಯ ಕಲಾವೈಭವ ನೃತ್ಯ ಸ್ಪರ್ಧೆ ನಡೆಯಲಿದೆ ವಿಜೇತರಿಗೆ ಪ್ರಥಮ ಬಹುಮಾನ 50 ಸಾವಿರ ನಗದು ಹಾಗೂ ಟ್ರೋಪಿ,ದ್ವಿತೀಯ 25 ಸಾವಿರ ಹಾಗೂ ಟ್ರೋಪಿ ಹಾಗೂ ತೃತೀಯ 15ಸಾವಿರ ಹಾಗೂ ಟ್ರೋಪಿ ನೀಡಲಾಗುವುದು ಎಂದು ತಿಳಿಸಿದರು. ಸಂಘದ ಉಪಾಧ್ಯಕ್ಷ ಜೀವನ್,ಉಪಾಧ್ಯಕ್ಷ ಫೆಲಿಕ್ಸ್,ಹಾಗೂ ಸದಸ್ಯ ರವಿಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ತಿತರಿದ್ದರು.