Kodagu

ನಾಪೋಕ್ಲು -ಕಕ್ಕಬ್ಬೆ ಮುಖ್ಯ ರಸ್ತೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ: ಸಂಚಾರಕ್ಕೆ ಅಡಚಣೆ

admincoorgdaily

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು-ಕಕ್ಕಬ್ಬೆ ತೆರಳುವ ಮುಖ್ಯ ರಸ್ತೆಗೆ ಮರವೊಂದು ಅಡ್ಡಲಾಗಿ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಭಾನುವಾರ ಸಂಜೆ ನಡೆದಿದೆ. ಕಕ್ಕಬ್ಬೆ ಬಳಿಯ ಕುಂಜಿಲ ಗ್ರಾಮದ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿದೆ. ಇದರಿಂದ ವಿದ್ಯುತ್ ಕಂಬಗಳು ಕೂಡ ರಸ್ತೆಗೆ ಅಡ್ಡಲಾಗಿ ಉರಳಿ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಮರ ಬೀಳುವ ಸಂದರ್ಭ ಈ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದಿರುವುದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ನಾಪೋಕ್ಲು ಸೆಸ್ಕ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರು ಸ್ಥಳಕ್ಕೆ ಧಾವಿಸಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ ಹಾಗೂ ವಿದ್ಯುತ್ ಕಂಬವನ್ನು ಗ್ರಾಮಸ್ಥರು ಹಾಗೂ ಸಾರ್ವಜನಿಕರ ಸಹಕಾರದಿಂದ ತೆರವುಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.