ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾದ ವಿವಾಹಿತ ಮಹಿಳೆ! ಏನಿದು ಘಟನೆ ಗೊತ್ತೇ!!
ಚಿಕ್ಕಮಗಳೂರು:ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ವಿವಾಹಿತೆಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಘಟನೆ ಗುರುವಾರ ನಡೆದಿದೆ.22 ವರ್ಷದ ಪೂಜಾ ಎಂಬ ಯುವತಿ, ಕೇವಲ ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದು.ಆಶಿಕ್ ಎಂಬ ಮುಸ್ಲಿಂ ಯುವಕನೊಂದಿಗೆ ಮನೆ ಬಿಟ್ಟು ಪರಾರಿಯಾಗಿದ್ದಾರೆ. ಪತ್ನಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಮಹಿಳೆಯ ಪತಿ ತಕ್ಷಣವೇ ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಶೋಧ ನಡೆಸಿ ಮಹಿಳೆಯನ್ನು ಪತ್ತೆಹಚ್ಚಿದ್ದಾರೆ.
ಪೂಜಾ ಪತ್ತೆಯಾದ ಸುದ್ದಿಯ ಬಳಿಕ, ಹಿಂದೂ ಸಂಘಟನೆ ಮುಖಂಡರು ಹಾಗೂ ಗ್ರಾಮಸ್ಥರು ಠಾಣೆಯ ಮುಂದೆ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ, ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಠಾಣೆಯ ಗೇಟ್ ಮುಚ್ಚಿದ್ದಕ್ಕೆ ತೀವ್ರ ಆಕ್ರೋಶಗೊಂಡ ಪ್ರತಿಭಟನಾಕಾರರು, ಏಕಾಏಕಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ರಸ್ತೆ ತಡೆ ನಡೆಸಿದರು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ, ಪೊಲೀಸರು ಪ್ರತಿಭಟನಾಕಾರರೊಂದಿಗೆ ತುರ್ತು ಮಾತುಕತೆ ನಡೆಸಿ, ಮಹಿಳೆಯನ್ನು ಠಾಣೆ ಮುಂಭಾಗಕ್ಕೆ ತರಲು ಭರವಸೆ ನೀಡಿದರು. ಇದಾದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
What's Your Reaction?
Like
1
Dislike
0
Love
0
Funny
0
Angry
0
Sad
1
Wow
0
