ಪ್ರೌಢಶಾಲಾ ಶಿಕ್ಷಕರಿಗೆ ಅನಾನುಕೂಲವಾಗದಂತೆ ಕಾರ್ಯನಿರ್ವಹಿಸಲು ಗ್ರಾಮ ಪಂಚಾಯಿತಿವಾರು ಗಣತಿದಾರರಾಗಿ ನೇಮಕ ಮಾಡಲು ಶಾಸಕ ಎಎಸ್ ಪೊನ್ನಣ್ಣ ಅವರಿಗೆ ಮನವಿ ಸಲ್ಲಿಕೆ

ವಿರಾಜಪೇಟೆ:ತಾಲ್ಲೂಕಿನ ಪ್ರೌಢಶಾಲೆ ಮುಖ್ಯ ಶಿಕ್ಷಕರ ಸಂಘ ಹಾಗೂ ಅನುದಾನಿತ ನೌಕರರ ಸಂಘ ಮತ್ತು ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘದ ನಿಯೋಗವು ಶಾಸಕರು ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರನ್ನು ಭೇಟಿಯಾಗಿ ಚರ್ಚಿಸಿದರು.
ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಪ್ರೌಢಶಾಲಾ ಶಿಕ್ಷಕರಿಗೆ ಅನಾನುಕೂಲ ಆಗದಂತೆ ಕಾರ್ಯನಿರ್ವಹಿಸಲು, ಗ್ರಾಮಪಂಚಾಯತ್ ವಾರು ಗಣತಿದಾರರಾಗಿ ನೇಮಕ ಮಾಡಲು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾನಂಡ ಪೃಥ್ವಿ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.