ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ವಿರಾಜಪೇಟೆ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ ನೇತೃತ್ವ ತಂಡ

ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ವಿರಾಜಪೇಟೆ ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ ನೇತೃತ್ವ ತಂಡ

ದೆಹಲಿ: ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಹಾಗೂ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರನ್ನು ವಿರಾಜಪೇಟೆ ಪುರಸಭೆ ಅಧ್ಯಕ್ಷರಾದ ಶ್ರೀಮತಿ ಮನೆಯಪಂಡ ದೇಚಮ್ಮ ಕಾಳಪ್ಪ ಅವರ ನೇತೃತ್ವದಲ್ಲಿ ಸದಸ್ಯರಾದ ಮತೀನ್ ಎಸ್.ಹೆಚ್, ರಾಜೇಶ್ ಪದ್ಮನಾಭ, ಮಹಮ್ಮದ್ ರಾಫಿ, ಬೆನ್ನಿ ಆಗಸ್ಟಿನ್ ಭೇಟಿಯಾದರು. ಈ ಸಂದರ್ಭ ಕರ್ನಾಟಕದಿಂದ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೈನ್ ಅವರು ಕೂಡ ಇದ್ದರು.