ರೈಲಿಗೆ ತಲೆಕೊಟ್ಟು‌ ಆತ್ಮಹತ್ಯೆ ‌ಮಾಡಿಕೊಂಡ ಪಶು ವೈದ್ಯಕೀಯ ಕಾಲೇಜು ವಿದ್ಯಾರ್ಥಿ

Aug 19, 2025 - 10:30
 0  431
ರೈಲಿಗೆ ತಲೆಕೊಟ್ಟು‌ ಆತ್ಮಹತ್ಯೆ ‌ಮಾಡಿಕೊಂಡ ಪಶು ವೈದ್ಯಕೀಯ ಕಾಲೇಜು ವಿದ್ಯಾರ್ಥಿ

ಹಾಸನ: ನಗರದ ಡೈರಿ ಸರ್ಕಲ್ ಬಳಿಯ ರೈಲ್ವೆ ಹಳಿಯಲ್ಲಿ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಹರಿಯಾಣ ಮೂಲದ ಓಷರ್‌ಸಿಂಗ್ (19) ಎಂದು ಗುರುತಿಸಲಾಗಿದೆ. ಹಾಸನದ ಪಶು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ ಓಷರ್‌ಸಿಂಗ್, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನೆಂದು ತಿಳಿದುಬಂದಿದೆ. ಘಟನೆಗೆ ಮುನ್ನ ಆತ ತನ್ನ ಸ್ನೇಹಿತನೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಾನೆ. ನಂತರ ರೈಲ್ವೆ ಹಳಿಯಲ್ಲಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಆರಂಭಿಸಲಾಗಿದೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 1
Wow Wow 0