Kodagu

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ತಂಡಕ್ಕೆ ಗೆಲುವು

admincoorgdaily

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ತಂಡಕ್ಕೆ ಗೆಲುವು

ಮಡಿಕೇರಿ; ಕೊಡಗು ಗೌಡ ಯುವ ವೇದಿಕೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗೌಡ ಕುಟುಂಬಗಳ ನಡುವಿನ ಕ್ರಿಕೆಟ್ ಪಂದ್ಯಾವಳಿಯ ಪ್ರದರ್ಶನ ಪಂದ್ಯದಲ್ಲಿ ಪಾಲ್ಗೊಂಡ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ತಂಡ, ಆಯೋಜಕರ ತಂಡದ ಎದುರು ಜಯ ಗಳಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕಾರ್ಯನಿರತ ಪತ್ರಕರ್ತರ ಸಂಘ ಐದು ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕೆ 84 ರನ್ ಕಲೆ ಹಾಕಿತ್ತು. ಬಳಿಕ ಬ್ಯಾಟ್ ಮಾಡಿದ ಕೊಡಗು ಗೌಡ ಯುವ ವೇದಿಕೆ ತಂಡ ಐದು ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಕೇವಲ 66 ರನ್ ಗಳಿಸುವ ಮೂಲಕ ಸೋಲು ಅನುಭವಿಸಿತು. ಆ ಮೂಲಕ ಪ್ರದರ್ಶನ ಪಂದ್ಯದಲ್ಲಿ ಕೊಡಗು ಕಾರ್ಯನಿರತ ಪತ್ರಕರ್ತರ ಸಂಘ 18 ರನ್‌ಗಳ ಭರ್ಜರಿ ಜಯ ಸಾಧಿಸಿತು.