Kodagu

ಸ್ಕೂಟಿಯಲ್ಲಿ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

admincoorgdaily

ಸ್ಕೂಟಿಯಲ್ಲಿ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಸಿದ್ದಾಪುರ:ನೆಲ್ಲಿಹುದಿಕೇರಿ ವ್ಯಾಪ್ತಿಯ ಅತ್ತಿಮಂಗಳ ಬಳಿ ಸ್ಕೂಟಿಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆದಿದೆ. ಘಟನೆ ಮರಗೋಡು ರಸ್ತೆಯಲ್ಲಿ ನಡೆದಿದೆ. ನೆಲ್ಲಿಹುದಿಕೇರಿ ಎಂ.ಜಿ ಕಾಲೋನಿ ನಿವಾಸಿ ಸಜಿತ್(45) ಅವರು ಸ್ಕೂಟಿಯಲ್ಲಿ ಮಡಿಕೇರಿ ಕಡೆಗೆ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಮರಿಯಾನೆಯೊಂದಿಗೆ ಬಂದ ಕಾಡಾನೆ ಸಜಿತ್ ಅವರ ಮೇಲೆ ದಾಳಿ ನಡೆಸಿದೆ.

 ದಾಳಿಯಲ್ಲಿ ಸಜಿತ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಅವರನ್ನು ರಕ್ಷಿಸಿ ಸಿದ್ದಾಪುರ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆನೆ ಓಡಾಡುವ ಪ್ರದೇಶದಲ್ಲಿ ರಾತ್ರಿ ವೇಳೆ ಓಡಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.