ಎ.ಕೆ ಸುಬ್ಬಯ್ಯ ಅವರ 6ನೇ ವರ್ಷದ ಪುಣ್ಯಸ್ಮರಣೆ: ತಂದೆಗೆ ಗೌರವ ನಮನ ಸಲ್ಲಿಸಿದ ಶಾಸಕ ಎಎಸ್ ಪೊನ್ನಣ್ಣ
ವಿರಾಜಪೇಟೆ:ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು, ತಮ್ಮ ತಂದೆಯವರಾದ ದಿವಂಗತ ಶ್ರೀ ಎ.ಕೆ ಸುಬ್ಬಯ್ಯರವರ 6ನೇ ಪುಣ್ಯ ಸ್ಮರಣೆ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಪೊನ್ನಂಪೇಟೆ ತಾಲೂಕು ಹುದಿಕೇರಿಯ ಬೆಳ್ಳೂರಿನಲ್ಲಿರುವ ತಮ್ಮ ತಂದೆಯವರ ಸಮಾಧಿ ಬಳಿಗೆ ತೆರಳಿದ ಶಾಸಕರು, ಪುಷ್ಪ ನಮನ ಸಲ್ಲಿಸಿ ಪ್ರಾರ್ಥಿಸುವ ಮೂಲಕ ಪುಣ್ಯ ಸ್ಮರಣೆ ದಿನದಂದು ಗೌರವಾರ್ಪಣೆ ಸಲ್ಲಿಸಿದರು. ಈ ಸಂದರ್ಭದ ಶಾಸಕರ ಹಿರಿಯ ಸಹೋದರರಾದ ಅಜ್ಜಿಕುಟ್ಟಿರ ನರೇನ್ ಎಸ್. ಕಾರ್ಯಪ್ಪ ದಂಪತಿಗಳು, ಶಾಸಕರ ತಾಯಿಯ ಹಿರಿಯ ಸಹೋದರಿ, ಅಜ್ಜಿಕುಟ್ಟಿರ ಕುಟುಂಬದ ಸದಸ್ಯರುಗಳು, ಶಾಸಕರ ಆಪ್ತರು, ಪಕ್ಷದ ಪ್ರಮುಖರು ಹಾಗು ಇತರರು ಉಪಸ್ಥಿತರಿದ್ದರು.