ಗ್ರಾಮ ಪಂಚಾಯಿತಿಗೆ ಕಟ್ಟಡ ಖರೀದಿಸಲು ಗ್ರಾಮೀಣ ಅಭಿವೃದ್ಧಿ ಸಚಿವರಿಗೆ ಎ.ಎಸ್ ಪೊನ್ನಣ್ಣ ಮನವಿ:

ಬೆಂಗಳೂರು:ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರನ್ನು, ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ, ಗ್ರಾಮ ಪಂಚಾಯಿತಿ ಸದಸ್ಯರು ಭೇಟಿ ಮಾಡಿ, ಕೆ ಬಾಡಗ ಗ್ರಾಮ ಪಂಚಾಯತಿ ಕಚೇರಿಗೆ, ಮಹಿಳಾ ಸಾಂಸ್ಕೃತಿಕ ಸಂಘದ ಕಟ್ಟಡವನ್ನು ಪಂಚಾಯಿತಿಯಲ್ಲಿ ಲಭ್ಯವಿರುವ ಹಣದಲ್ಲಿ, ಸದ್ರಿ ಕಟ್ಟಡವನ್ನೇ ಖರೀದಿಸಲು ಅನುಮತಿ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೆ ಬಾಡಗ ಪಂಚಾಯಿತಿ ಅಧ್ಯಕ್ಷರಾದ ರೀತಿಶ್ ಬಿದ್ದಪ್ಪ, ಪಂಚಾಯಿತಿ ಸದಸ್ಯರಾದ ಸಿ ಡಿ ಬೋಪಣ್ಣ ಉಪಸ್ಥಿತರಿದ್ದರು.
What's Your Reaction?






