ಬಾಳೆಲೆ ವಲಯ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದ ಎ.ಎಸ್ ಪೊನ್ನಣ್ಣ:ಪಕ್ಷ ಸಂಘಟಿಸಲು ಕರೆ

ಬಾಳೆಲೆ  ವಲಯ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸಿದ ಎ.ಎಸ್ ಪೊನ್ನಣ್ಣ:ಪಕ್ಷ ಸಂಘಟಿಸಲು ಕರೆ

ಪೊನ್ನಂಪೇಟೆ:ತಾಲೂಕಿನ ಬಾಳೆಲೆ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಬಾಳಲೆ ವಲಯ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು. ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೋದಂಡ ಸೋಮಣ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ಶಾಸಕರೊಂದಿಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ, ತಮ್ಮ ಅವಾಲುಗಳನ್ನು ನೀಡಿದರು.

ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಯಾವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಶಾಸಕರಾದ ಎ.ಎಸ್ ಪೊನ್ನಣ ಸಲಹೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ವಲಯ ಕಾಂಗ್ರೆಸ್ ಪದಾಧಿಕಾರಿಗಳು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ, ನಿಟ್ಟೂರು ವಲಯ ಅಧ್ಯಕ್ಷರಾದ ಪವನ್, ಚೋಂದಮ್ಮ, ಪಂಚಾಯಿತಿ ಸದಸ್ಯರಾದ ವಿನು ಉತ್ತಪ್ಪ, ಸರಕಾರಿ ನಾಮನಿರ್ದೇಶಿತ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.