ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 3 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ

ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ  3 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ

ಮಡಿಕೇರಿ ಫೆ.13:-ತಾಲ್ಲೂಕಿನ ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಶುಕ್ರವಾರ ಚಾಲನೆ ನೀಡಿದರು. 

ಕಾಟಕೇರಿ ಬಳಿಯ ಕಾಸ್ಪಾಡಿ ರಸ್ತೆ, ಭಗವತಿ ದೇವಸ್ಥಾನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ, ಅಪ್ಪೇಂದ್ರೀಯಪ್ಪ ದೇವಸ್ಥಾನ ರಸ್ತೆ ಉದ್ಘಾಟನೆ, ಕಾಟಕೇರಿ ಗೋಳಿಕಟ್ಟೆ ಮುಖ್ಯ ರಸ್ತೆ, ಮದೆನಾಡು ಬೈರೆಟ್ಟಿರ ಜಂಕ್ಷನ್ ರಸ್ತೆ ಮತ್ತು ಮದೆನಾಡು ಮಠದ ಮನೆ ರಸ್ತೆಯನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಉದ್ಘಾಟಿಸಿದರು. 

ಬಳಿಕ ಗೋಳಿಕಟ್ಟೆ ಸರ್ಕಾರಿ ಶಾಲೆ ಪರಿಶೀಲಿಸಿದರು, ಕೋಲ್ಪೆ ದೈವಸ್ಥಾನ ರಸ್ತೆ ಉದ್ಘಾಟಿಸಿದರು. ಹಾಗೆಯೇ ದೇಶ್‍ಕೋಡಿ, ಸಾಲಾಪು ರಸ್ತೆ ಭೂಮಿ ಪೂಜೆ ನೆರವೇರಿಸಿದರು. ನಂತರ ಕೋಲ್ಚಾರು ರಸ್ತೆ ಉದ್ಘಾಟನೆ, ಕೆಮ್ಮಾರನ ಶಿರಾಜ್ ರಸ್ತೆ ಉದ್ಘಾಟಿಸಿದರು. ಬಳಿಕ ನೆರಿಯನ ಐನ್‍ಮನೆಗೆ ಭೇಟಿ ನೀಡಿದರು, ಹಾಗೆಯೇ ಈಶ್ವರಪ್ಪ ಮಾದೂರಪ್ಪ ರಸ್ತೆ ಉದ್ಘಾಟಿಸಿದರು. 

ಜೋಡುಪಾಲ ಕಿರಿಕಿಲ್ ರಸ್ತೆ ಭೂಮಿಪೂಜೆ, ಅಬ್ಬಿಕೊಲ್ಲಿ ರಸ್ತೆ ಉದ್ಘಾಟಿಸಿದರು. ಕುಡಿಯರ ಕಾಲೋನಿಯಲ್ಲಿ ಕುಂದುಕೊರತೆ ಸಭೆ ನಡೆಸಿದರು. ಕಾಟಕೇರಿ ಕೂರನ ಬಾಣೆ ರಸ್ತೆ ಉದ್ಘಾಟಿಸಿದರು. ತಾಳತ್ತಮನೆ, ಮಂಗಳೂರು-ಭಾಗಮಂಡಲ ಲಿಂಕ್ ರಸ್ತೆ ಉದ್ಘಾಟಿಸಿದರು. ತಾಳತ್ತಮನೆ ದುರ್ಗಾ ಭಗವತಿ ದೇವಸ್ಥಾನ ರಸ್ತೆ ಭೂಮಿ ಪೂಜೆ ನೆರವೇರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು ,3 ಕೋಟಿ ರೂ. ವೆಚ್ಚದ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ ಎಂದು ತಿಳಿಸಿದರು.  

ಕಳೆದ ಎರಡೂವರೆ ವರ್ಷದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ. ಸುಮಾರು 2,500 ಕಿಮೀ. ರಸ್ತೆ ಅಭಿವೃದ್ಧಿಗೆ ಮುಂದಾಗಲಾಗಿದೆ ಎಂದರು. 

ಮುಖ್ಯಮಂತ್ರಿಯವರ ರಸ್ತೆ ಅಭಿವೃದ್ಧಿ ಯೋಜನೆಯಡಿ 50 ಕೋಟಿ ರೂ., ಜತೆಗೆ ಹೆಚ್ಚುವರಿಯಾಗಿ 30 ಕೋಟಿ ರೂ. ಹೀಗೆ ರಸ್ತೆ, ಸೇತುವೆ, ತಡೆಗೋಡೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸರ್ಕಾರ ಅನುದಾನ ಒದಗಿಸಿದೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.

ಕೊಡಗು ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಬೇಡಿಕೆ ಇದೆ. ಜೊತೆಗೆ ಕುಡಿಯುವ ನೀರು, ವಿದ್ಯುತ್ ಹಾಗೂ ಸಾರಿಗೆ ಸಂಪರ್ಕಕ್ಕೆ ಸಾಕಷ್ಟು ಬೇಡಿಕೆಗಳಿದ್ದು, ಹಂತ ಹಂತವಾಗಿ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕರು ವಿವರಿಸಿದರು. 

ಜಲಜೀವನ್ ಮಿಷನ್ ಯೋಜನೆಯಡಿ ಕೊಡಗು ಜಿಲ್ಲೆಗೆ ಇನ್ನೂ ಅನುದಾನ ಬರಬೇಕಿದೆ. ಕುಡಿಯುವ ನೀರಿನ ಯೋಜನೆಗಾಗಿ 58 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. 

‘ಜಮ್ಮಾ ಬಾಣೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕರು ಪಟ್ಟೆದಾರರ ಭೂಮಿ ಸಂಬಂಧ ಸಮಸ್ಯೆ ಪರಿಹರಿಸಲು ಶ್ರಮಿಸಲಾಗಿದೆ. ಹಿಂದಿನ ಶಾಸಕದ್ವಯರು ಸಹ ಜಮ್ಮಬಾಣೆ ಭೂಮಿ ಸಮಸ್ಯೆ ಪರಿಹರಿಸಲು ತಮ್ಮದೇ ಆದ ಪ್ರಯತ್ನ ಮಾಡಿದ್ದಾರೆ ಎಂದು ನುಡಿದರು.’ 

ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಶಾಸಕರು ಕಳೆದ ಬಾರಿ ಬಜೆಟಿನಲ್ಲಿ ವಿರಾಜಪೇಟೆ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಮುಂದಾಗಲಾಗಿದೆ. ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಯನ್ನು 50 ಹಾಸಿಗೆ ಆಸ್ಪತ್ರೆಯನ್ನಾಗಿ ಮತ್ತು ಹುದಿಕೇರಿ ಆಸ್ಪತ್ರೆಯನ್ನು ಸಮುದಾಯ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವಲ್ಲಿ ಪ್ರಕಟಿಸಲಾಗಿತ್ತು, ಅದರಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಸ್ಥಳ ಪರಿಶೀಲಿಸಲಿದ್ದು, ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುತ್ತದೆ ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು.    

ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಬಲವರ್ಧನೆಗೆ ಕ್ರಮವಹಿಸಲಾಗಿದೆ. ಆನೆ ಮತ್ತು ಮಾನವ ಸಂಘರ್ಷ ತಡೆಯಲು 22 ಕಿ.ಮೀ. ಉದ್ದದ ಕಂದಕ/ ಬೇಲಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು. 

ಕಳೆದ ಬಾರಿ ಬಜೆಟಿನಲ್ಲಿ ಕೊಡಗು ಜಿಲ್ಲೆಗೆ ಘೋಷಣೆ ಮಾಡಿದ್ದ ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ. ಇವು ಪೂರ್ಣಗೊಳ್ಳಬೇಕು. ಮುಂದಿನ ಬಜೆಟಿನಲ್ಲಿ ಕೊಡಗು ಜಿಲ್ಲೆಗೆ ವಿಶೇಷ ಪ್ರಾಧ್ಯಾನತೆ ದೊರೆಯುವ ಸಾಧ್ಯತೆ ಇದೆ ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು.  

ಕಾವೇರಿ ನದಿ ಪಾತ್ರದಲ್ಲಿನ ತಗ್ಗು ಪ್ರದೇಶದಲ್ಲಿ ತಡೆಗೋಡೆ ನಿರ್ಮಾಣ ಹಾಗೂ ಸ್ವಚ್ಚತೆಗೆ ಸುಮಾರು 50 ಕೋಟಿ ರೂ ವಿನಿಯೋಗಿಸಲಾಗುತ್ತಿದೆ. ಹಾಗೆಯೇ ಲಕ್ಷ್ಮಣ ತೀರ್ಥ ನದಿ ದಂಡೆಯಲ್ಲಿ ವಾಸಿಸುವ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಪುನರ್ ವಸತಿ ಕಲ್ಪಿಸಲು 20 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ ಎಂದು ಶಾಸಕರು ಮಾಹಿತಿ ನೀಡಿದರು.  

ಗ್ರಾ.ಪಂ ಅಧ್ಯಕ್ಷರಾದ ವಿಮಲಾಕ್ಷಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಕೊಲ್ಯದ ಗಿರೀಶ್, ತಹಶೀಲ್ದಾರ್ ಶ್ರೀಧರ, ತಾ.ಪಂ.ಇಒ ಶೇಖರ್, ಗ್ರಾ.ಪಂ.ಸದಸ್ಯರಾದ ಆಗಸ್ಟಿನ್ ಜಯರಾಜ್, ಸೈಯದ್ ಅಲ್ವಿ, ಸೂರಜ್ ಹೊಸೂರು, ಇಸ್ಮಾಯಿಲ್, ಮಜ್ಜಿಗೆಮನೆ ದೀಪಕ್, ಸ್ಥಳೀಯ ಪ್ರಮುಖರು ಹಾಗೂ ಗ್ರಾ.ಪಂ.ಸದಸ್ಯರು, ಅಧಿಕಾರಿಗಳು ಇತರರು ಇದ್ದರು.