ಎಐಸಿಸಿ ಸಮಿತಿಯ ಕಾನೂನು-ಮಾನವ ಹಕ್ಕು ಮಾಹಿತಿ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿದ ಎ.ಎಸ್ ಪೊನ್ನಣ್ಣ

ದೆಹಲಿ:ನವದೆಹಲಿಯ ವಿಜ್ಞಾನ ಭವನದಲ್ಲಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾನೂನು-ಮಾನವ ಹಕ್ಕು ಮತ್ತು ಮಾಹಿತಿ ಘಟಕದ ವತಿಯಿಂದ ವಾರ್ಷಿಕ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಸಂವಿಧಾನದ ಹಕ್ಕುಗಳು, ಸಂವಿಧಾನದ ರಕ್ಷಣೆ ಹಾಗೂ ಸಂವಿಧಾನದ ಅಡಿಯಲ್ಲಿ ಸಾಮಾಜಿಕ ನ್ಯಾಯ ವಿಚಾರವಾಗಿ ಸುಧೀರ್ಘವಾದ ಚರ್ಚೆ ನಡೆಸಲಾಯಿತು.ಸಮಾವೇಶದ ವೇದಿಕೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ರಾಹುಲ್ ಗಾಂಧಿ, ಸಂಸದರಾದ ಶ್ರೀಮತಿ ಪ್ರಿಯಾಂಕಾ ಗಾಂಧಿ,ಮಾಜಿ ಕೇಂದ್ರ ಸಚಿವರಾದ ಪಿ.ಚಿದಂಬರಂ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ವಿವಿಧ ರಾಜ್ಯಗಳ ಸಚಿವರುಗಳು, ಸಂಸದರುಗಳು, ಪಕ್ಷದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.