ಬ್ರಿಡ್ಜ್ ಟು ಬೆಂಗಳೂರು ತಾಂತ್ರಿಕ ಶೃಂಗಸಭೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎ.ಎಸ್ ಪೊನ್ನಣ್ಣ

ಬ್ರಿಡ್ಜ್ ಟು ಬೆಂಗಳೂರು ತಾಂತ್ರಿಕ ಶೃಂಗಸಭೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎ.ಎಸ್ ಪೊನ್ನಣ್ಣ

ನವದೆಹಲಿ:ಐಟಿಸಿ ಮೌರ್ಯ ಹೋಟೆಲ್ ನಲ್ಲಿ ಬ್ರಿಡ್ಜ್ ಟು ಬೆಂಗಳೂರು ಎಂಬ ತಾಂತ್ರಿಕ ಶೃಂಗಸಭೆ ಕಾರ್ಯಕ್ರಮ ನಡೆಯಿತು. ಮಾಹಿತಿ ತಂತ್ರಜ್ಞಾನದ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಯ ದೃಷ್ಟಿಕೋನದಿಂದ ಹಾಗೂ ಹೂಡಿಕೆ ಸಂಬಂಧ, ಅತ್ಯಂತ ಮಹತ್ವದ ಶೃಂಗಸಭೆ ಇದಾಗಿದ್ದು ಇದರಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್, ಸಚಿವರುಗಳಾದ ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಲಕ್ಷ್ಮಿ ಹೆಬ್ಬಾಳ್ಕರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಟಿ.ಬಿ ಜಯಚಂದ್ರ, ದೇಶ ವಿದೇಶಗಳ ಪ್ರಮುಖ ಮಾಹಿತಿ-ತಂತ್ರಜ್ಞಾನ ಕಂಪನಿಗಳ ಮುಖ್ಯಸ್ಥರು, ವಿವಿಧ ದೇಶದ ರಾಯಭಾರಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಶೃಂಗಸಭೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಕಡೆಗಳಲ್ಲಿ ಬಂಡವಾಳ ಹೂಡಿಕೆಗಳ ಬಗ್ಗೆ ಹಾಗೂ ಕರ್ನಾಟಕವು ಮಾಹಿತಿ ತಂತ್ರಜ್ಞಾನಕ್ಕೆ ನೀಡುತ್ತಿರುವ ಅವಕಾಶಗಳ ಹಾಗೂ ಮಹತ್ವದ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಮಾಹಿತಿ ನೀಡಲಾಯಿತು. ರಾಜ್ಯದಲ್ಲಿ ತಂತ್ರಜ್ಞಾನ ಅಭಿವೃದ್ಧಿಗೆ ಇರುವ ವಿಪುಲ ಅವಕಾಶಗಳನ್ನು ಈ ಶೃಂಗಸಭೆಯಲ್ಲಿ ತೆರೆದಿಡಲಾಯಿತು.