ವಿಧಾನಸಭಾ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಿದ ಎ.ಎಸ್ ಪೊನ್ನಣ್ಣ

ವಿಧಾನಸಭಾ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಿದ ಎ.ಎಸ್ ಪೊನ್ನಣ್ಣ

ಬೆಂಗಳೂರು:ವಿಧಾನಸಭಾ ಮುಂಗಾರು ಅಧಿವೇಶನದ ಮೊದಲ ದಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಭಾಗವಹಿಸಿದ್ದರು. ಕ್ಷೇತ್ರದ ಹಾಗೂ ಕೊಡಗಿನ ಜನತೆಯನ್ನು ನಿರಂತರ ಕಾಡುತ್ತಿರುವ ಕೆಲವು ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ರವರೊಂದಿಗೆ ಚರ್ಚಿಸಿದರು.