ಮೇಕೇರಿ ಶಕ್ತಿನಗರ ಕಾಲೋನಿ ನಿವಾಸಿಗಳಿಗೆ ಸ್ವಂತ ವೆಚ್ಚದಲ್ಲಿ ಕಾರ್ಪಲ್ ಒದಗಿಸಿಕೊಟ್ಟ ಎ.ಎಸ್ ಪೊನ್ನಣ್ಣ
admincoorgdaily

ಮಡಿಕೇರಿ:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು, ನಾಪೋಕ್ಲು ಬ್ಲಾಕ್ ಮೇಕೇರಿ ಗ್ರಾಮದ ಶಕ್ತಿನಗರ ಕಾಲೋನಿ ಪರಿಸರದಲ್ಲಿ, ಬರೆ ಕುಸಿದು ತೊಂದರೆಯಲ್ಲಿದ್ದ ಜನರಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣರವರು ತಮ್ಮ ಸ್ವಂತ ವೆಚ್ಚದಲ್ಲಿ ಟಾರ್ಪಲ್ ಗಳನ್ನು ವಿತರಿಸಿ ಸಹಾಯ ಹಸ್ತ ಚಾಚಿದರು. ಕಾರ್ಯನಿಮಿತ್ತ ಬೆಂಗಳೂರಿನಲ್ಲಿರುವ ಶಾಸಕರು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್ ಮುಖಾಂತರ ಸಂತ್ರಸ್ತರಿಗೆ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮೇಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಪೂಜಾರಿರ ಧ್ರುವ, ಹಾಕತ್ತೂರು ವಲಯ ಅಧ್ಯಕ್ಷ ಪಿಯೂಷ್ ಪೆರೇರ, ಗ್ರಾಮ ಪಂಚಾಯತ್ ಸದಸ್ಯ ಹನೀಫ್, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಬಶೀರ್, ಸ್ಥಳೀಯ ಪ್ರಮುಖರಾದ ಹ್ಯಾರಿಸ್, ರಫೀಕ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಸಕರ ಸಂದೇಶವನ್ನು ಜನರಿಗೆ ತಲುಪಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ಬೆಂಗಳೂರಿಂದ ಹಿಂತಿರುಗಿದ ಕೂಡಲೇ ಎಲ್ಲರನ್ನು ಖುದ್ದಾಗಿ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ ಶಾಶ್ವತ ಪರಿಹಾರದ ಕುರಿತು ವ್ಯವಸ್ಥೆ ಮಾಡುವುದಾಗಿ ಹೇಳಿದರು.