ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ  ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಮಡಿಕೇರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕ ಮತ್ತು ಆಲ್ ಇಂಡಿಯಾ ಯುನೈಡೆಡ್ ಟ್ರೇಡ್ ಯೂನಿಯನ್ ಸೆಂಟರ್ ಸಂಯುಕ್ತಾಶ್ರಯದಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.

 ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಮತ್ತು ಆಲ್ ಇಂಡಿಯಾ ಯುನೈಡೆಡ್ ಟ್ರೇಡ್ ಯೂನಿಯನ್ ಸೆಂಟರ್‌ನ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ಮಾತನಾಡಿ, ಈ ಹಿಂದೆ ಪ್ರತಿಭಟನೆ ನಡೆಸಿದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ ಮಾಸಿಕ ಗೌರವಧನ, ಮಾಸಿಕ ವೇತನ ೧೦,೦೦೦ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇಂದು ನೀಡುತ್ತಿಲ್ಲ. ಇದರೊಂದಿಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರೂ.೧೦೦೦ ಹೆಚ್ಚಳ ಮಾಡುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಆಶಾಕಾರ್ಯಕರ್ತೆಯರು ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪತ್ರಿಭಟನೆಯಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ೨೦೦ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.