ಕರ್ನಾಟಕ ಅರೆಭಾಷೆ ಅಕಾಡೆಮಿಯಿಂದ ಜು.27 ರಂದು ಆಟಿ ಹಬ್ಬ

ಮಡಿಕೇರಿ:ಕರ್ನಾಟಕ ಅರೆಭಾಷೆ ಸಂಸ್ಕಂತಿ ಮತ್ತು ಸಾಹಿತ್ಯ ಅಕಾಡೆಮಿ, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ, ಪುತ್ತೂರು ಒಕ್ಕಲಿಗ ಗೌಡ ಮಹಿಳಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಟಿ ಹಬ್ಬ-2025 ಕಾರ್ಯಕ್ರಮವು ಜುಲೈ, 27 ರಂದು ಬೆಳಗ್ಗೆ 9.30 ಗಂಟೆಗೆ ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮವು ಮಧಾಹ್ನ 12 ಗಂಟೆಗೆ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಪುತ್ತೂರು ಮಾಜಿ ಶಾಸಕರು ಮತ್ತು ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷರಾದ ಸಂಜೀವ ಮಠಂದೂರು, ಪುತ್ತೂರು ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಭವ್ಯಾ ಪಿ.ಆರ್.ನಿಡ್ಪಳ್ಳಿ, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರಾದ ರವಿ ಮುಂಗ್ಲಿಮನೆ, ಪುತ್ತೂರು ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷರಾದ ವಾರಿಜ ಕೆ.ಗೌಡ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷರಾದ ಅಮರನಾಥ ಗೌಡ ಬಪ್ಪಳಿಗೆ, ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್‍ನ ಅಧ್ಯಕ್ಷರಾದ ಡಿ.ವಿ.ಮನೋಹರ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಚಿದಾನಂದ ಬೈಲಾಡಿ, ಅಕಾಡೆಮಿ ಸದಸ್ಯರು, ಇತರರು ಪಾಲ್ಗೊಳ್ಳಲಿದ್ದಾರೆ. ಜುಲೈ, 27 ರಂದು ಬೆಳಗ್ಗೆ 9.30 ರಿಂದ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಗಂಡಸರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ.