ಮಾಲ್ದಾರೆ ಸರ್ಕಾರಿ ಶಾಲೆ ಎದುರು ಅಪಘಾತ: ಆಟೋ ಚಾಲಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

Apr 22, 2026 - 19:54
 0  1.8k
ಮಾಲ್ದಾರೆ ಸರ್ಕಾರಿ ಶಾಲೆ ಎದುರು ಅಪಘಾತ: ಆಟೋ ಚಾಲಕ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

ಸಿದ್ದಾಪುರ:- ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ದಾರೆ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಆಟೋ ಅಪಘಾತದಲ್ಲಿ ಆಟೋ ಚಾಲಕ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಂಚೆತಿಟ್ಟು ಹಾಡಿಯ ನಿವಾಸಿ ವೈ.ಎನ್. ಮಾದ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸುನೀಲ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ವಾಹನವು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

 ಡಿಕ್ಕಿಯ ತೀವ್ರತೆಗೆ ವೈ.ಎನ್. ಮಾದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಸಿದ್ದಾಪುರ ರಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

What's Your Reaction?

Like Like 0
Dislike Dislike 0
Love Love 1
Funny Funny 0
Angry Angry 0
Sad Sad 1
Wow Wow 0