ಹಾಕತ್ತೂರು–ಮರಗೋಡು ರಸ್ತೆಯ ಬಕ್ಕದಲ್ಲಿ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Jan 13, 2026 - 09:45
 0  2.4k
ಹಾಕತ್ತೂರು–ಮರಗೋಡು ರಸ್ತೆಯ ಬಕ್ಕದಲ್ಲಿ  ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

ಮಡಿಕೇರಿ:ಹಾಕತ್ತೂರು–ಮರಗೋಡು ಮುಖ್ಯ ರಸ್ತೆಯ ಬಕ್ಕ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮಾರುತಿ ಓಮ್ನಿ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಅಪಘಾತದ ಹೊಡೆತಕ್ಕೆ ಬೈಕ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಓಮ್ನಿ ವಾಹನದ ಮುಂಭಾಗ ಹಾಗೂ ಬಲಭಾಗಕ್ಕೆ ಭಾರೀ ಹಾನಿಯಾಗಿದೆ. ಗಾಯಗೊಂಡ ಸವಾರನಿಗೆ ತಲೆಗೆ ಗಾಯಗಳಾಗಿವೆ ಎನ್ನಲಾಗಿದೆ.

ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ನಿವಾಸಿಗಳು ಹಾಗೂ ಪ್ರಯಾಣಿಕರು ಗಾಯಾಳುವಿನ ನೆರವಿಗೆ ಧಾವಿಸಿ, ಪ್ರಾಥಮಿಕ ಚಿಕಿತ್ಸೆ ಒದಗಿಸಿದ ಬಳಿಕ ಆತನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಗಾಯಾಳುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳದಲ್ಲಿ ಜನಸಮೂಹ ಸೇರಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿಸಿದ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ರಸ್ತೆ ಭಾಗದಲ್ಲಿ ತಿರುವುಗಳು ಹೆಚ್ಚಿರುವುದರಿಂದ ಹಾಗೂ ವೇಗವಾಗಿ ವಾಹನಗಳು ಸಂಚರಿಸುವುದರಿಂದ ಅಪಘಾತಗಳು ಮರುಕಳಿಸುತ್ತಿರುವುದಾಗಿ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು, ವೇಗ ನಿಯಂತ್ರಣ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು ಎಂಬ ಬೇಡಿಕೆ ಸಾರ್ವಜನಿಕರಿಂದ ಕೇಳಿಬಂದಿದೆ.

What's Your Reaction?

Like Like 1
Dislike Dislike 1
Love Love 1
Funny Funny 1
Angry Angry 0
Sad Sad 4
Wow Wow 1