ಮತಾಂತರ ಆರೋಪ: ಕುಶಾಲನಗರದಲ್ಲಿ ಹಿಂದೂ ಸಂಘಟನೆಗಳಿಂದ 'ಜಾಗೃತಿ ಜಾಥಾ'

Jun 30, 2026 - 11:05
Jun 30, 2026 - 11:51
 0  1.2k
ಮತಾಂತರ ಆರೋಪ: ಕುಶಾಲನಗರದಲ್ಲಿ ಹಿಂದೂ ಸಂಘಟನೆಗಳಿಂದ 'ಜಾಗೃತಿ ಜಾಥಾ'

ಕುಶಾಲನಗರ, ಜೂನ್ 29: ಮತಾಂತರ ಆರೋಪ ಖಂಡಿಸಿ ಜನಾಂದೋಲನ ಹಿಂದೂ ಸಂಘಟನೆ ನೇತೃತ್ವದಲ್ಲಿ ಮಂಗಳವಾರ ಕಾವೇರಿ ನಿಸರ್ಗಧಾಮದಿಂದ ಬೃಹತ್ 'ಜಾಗೃತಿ ಜಾಥಾ' ಮೆರವಣಿಗೆ ನಡೆಯಿತು.

ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಕೇಸರಿ ಧ್ವಜ, ಭಗವದ್ಧ್ವಜ ಹಿಡಿದು 'ಜೈ ಶ್ರೀರಾಮ್', 'ಭಾರತ್ ಮಾತಾ ಕೀ ಜೈ' ಘೋಷಣೆ ಕೂಗುತ್ತಾ ಜಾಥಾದಲ್ಲಿ ಭಾಗವಹಿಸಿದ್ದರು.ನಿಸರ್ಗಧಾಮದಿಂದ ಆರಂಭವಾದ ಜಾಥಾ ಪಟ್ಟಣದ ಮುಖ್ಯರಸ್ತೆ ಮೂಲಕ ಗಣಪತಿ ದೇವಸ್ಥಾನದವರೆಗೆ ಸಾಗಿ, ಬಳಿಕ ಕಾರು ನಿಲ್ದಾಣದಲ್ಲಿ ಪ್ರತಿಭಟನಾ ಸಭೆಯಾಗಿ ಪರಿವರ್ತನೆಗೊಂಡಿತು.

ಹಿಂದೂ ಜಾಗರಣ ವೇದಿಕೆ, ಬಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ 20ಕ್ಕೂ ಹೆಚ್ಚು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ಮಹಿಳೆಯರು, ಯುವಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಜಾಥಾ ಹಿನ್ನೆಲೆಯಲ್ಲಿ ಪಟ್ಟಣದ ವರ್ತಕರು ಸ್ವಯಂಪ್ರೇರಣೆಯಿಂದ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ಸೂಚಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿತ್ತು.

What's Your Reaction?

Like Like 1
Dislike Dislike 2
Love Love 2
Funny Funny 1
Angry Angry 0
Sad Sad 0
Wow Wow 1