ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಂದ ಮಹಿಳೆಯರಿಗೆ ಅವಮಾನ ಆರೋಪ: ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಮಡಿಕೇರಿಯಲ್ಲಿ ಪ್ರತಿಭಟನೆ

ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಂದ ಮಹಿಳೆಯರಿಗೆ ಅವಮಾನ ಆರೋಪ: ಕೊಡಗು ಜಿಲ್ಲಾ  ಬಿಜೆಪಿ ಮಹಿಳಾ ಮೋರ್ಚಾದಿಂದ ಮಡಿಕೇರಿಯಲ್ಲಿ ಪ್ರತಿಭಟನೆ

ಮಡಿಕೇರಿ: ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಂದ ಮಹಿಳೆಯರಿಗೆ ಮಾಡುತ್ತಿರುವ ಅವಮಾನ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಹಳೆ ಖಾಸಗಿ ಬಸ್ ನಿಲ್ದಾಣದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

 ಸುದ್ದಿಗಾರರೊಂದಿಗೆ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಬಿಹಾರದ ದರ್ಭಾಂಗದಲ್ಲಿ ರಾಹುಲ್ ಗಾಂಧಿಯವರ ಮತದಾನ ಅಧಿಕಾರ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್-ಆರ್‌ಜೆಡಿ ವೇದಿಕೆಯಿಂದ ಪ್ರಧಾನಿ ಮೋದಿ ಮತ್ತು ಅವರ ದಿ.ತಾಯಿಯ ಬಗ್ಗೆ ಅಶ್ಲೀಲ ಪದಗಳ ನಿಂದನಾತ್ಮಕ ಘೋಷಣೆಗಳನ್ನು ಕೂಗಿ ಅವಮಾನ ಮಾಡಿದ್ದಾರೆ. ರಾಜ್ಯದಲ್ಲಿ ಹಿರಿಯ ಕಾಂಗ್ರೆಸ್ ರಾಜಕಾರಣಿ ಆರ್.ವಿ.ದೇಶಪಾಂಡೆ ಅವರು ಮಹಿಳಾ ಪತ್ರಕರ್ತೆಯೊಬ್ಬರು ಸಾಮಾಜಿಕ ಕಳಕಳಿಯಿಂದ ಹೆರಿಗೆ ಆಸ್ಪತ್ರೆ ಬಗ್ಗೆ ಬೇಡಿಕೆ ಇಟ್ಟಾಗ ಅವರೊಂದಿಗೆ ತಾಯ್ತನ ಹಾಗೂ ಹೆರಿಗೆಯ ಕುರಿತು ಉಡಾಫೆಯ ಮಾತನಾಡಿದ್ದಾರೆ. ಇದು ಖಂಡನೀಯ. ಇಂತಹ ಘಟನೆಗಳಿಂದ ಕಾಂಗ್ರೆಸ್ ಪಕ್ಷದ ನಾಯಕರುಗಳು ಮಹಿಳೆಯರ ಬಗ್ಗೆ ಯಾವ ರೀತಿಯ ದೃಷ್ಟಿಕೋನ ಹೊಂದಿದ್ದಾರೆ ಎನ್ನುವುದು ತಿಳಿಯುತ್ತದೆ. ತಾಯಂದಿರಿಗೆ ಅಪಮಾನಿಸುವಂತಹ ಕೀಳುಮಟ್ಟದ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ನೀಡಿ, ರಾಜಕಾರಣವನ್ನು ಕುಲಗೆಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ‌ ಕಾಳಪ್ಪ, ಸೇರಿದಂತೆ ಬಿಜೆಪಿ ಮಹಿಳಾ ಮೋರ್ಚಾದ ಪದಾಧಕಾರಿಗಳು, ನಗರಸಭೆ ಸದಸ್ಯರು, ಬಿಜೆಪಿ ಕಾರ್ಯಕರ್ತರಿದ್ದರು.