ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದ ಆರೋಪಿ ಅರೆಸ್ಟ್

Aug 29, 2025 - 15:47
 0  1.3k
ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದ ಆರೋಪಿ ಅರೆಸ್ಟ್

ಮಂಗಳೂರು: ಬಾಲಕಿಯನ್ನು ಹಲವು ಬಾರಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ದ.ಕ.ಜಿಲ್ಲಾ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ಸೆ.9ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪುತೂರು ನಗರ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬಾಲಕಿಯು 2025ರ ಮಾರ್ಚ್‌ನಿಂದ ಆರೋಪಿಯ ಜೊತೆ ತನ್ನ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಳು. ಒಂದು ದಿನ ಬಾಲಕಿಯನ್ನು ಭೇಟಿಯಾಗಲು ರೈಲ್ವೆ ಟ್ರಾಕ್ ಬಳಿ ಗುಡ್ಡ ಪ್ರದೇಶಕ್ಕೆ ಬರುವಂತೆ ಆರೋಪಿ ತಿಳಿಸಿದ್ದು ಅದರಂತೆ ಬಾಲಕಿ ತೆರಳಿದಾಗ ಆತ ಬಲವಂತದಿಂದ ದೈಹಿಕ ಸಂಪರ್ಕ ಮಾಡಿದ್ದ ಎನ್ನಲಾಗಿದೆ. ಆ ಬಳಿಕವೂ ಆರೋಪಿ ಗುಡ್ಡ ಪ್ರದೇಶಕ್ಕೆ ಬರುವಂತೆ ಹೇಳಿ ಅನೇಕ ಬಾರಿ ಬಲವಂತದಿಂದ ದೈಹಿಕ ಸಂಪರ್ಕ ಮಾಡಿರುವುದಾಗಿ ಬಾಲಕಿ ನೀಡಿದ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಆರೋಪಿಯನ್ನು ಪೊಲೀಸರು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

What's Your Reaction?

Like Like 1
Dislike Dislike 0
Love Love 1
Funny Funny 2
Angry Angry 2
Sad Sad 2
Wow Wow 0