ಮದ್ಯಪಾನ ಮಾಡಿ ಅತಿವೇಗದಿಂದ ವಾಹನ ಚಲಾಯಿಸಿ,ಪೊಲೀಸ್ ಅಧಿಕಾರಿಗೆ ಅವಾಚ್ಯ ಪದಗಳಿಂದ ನಿಂದನೆ: ಆರೋಪಿಯ ಬಂಧನ

Jul 6, 2025 - 20:33
 0  169
ಮದ್ಯಪಾನ ಮಾಡಿ ಅತಿವೇಗದಿಂದ ವಾಹನ ಚಲಾಯಿಸಿ,ಪೊಲೀಸ್ ಅಧಿಕಾರಿಗೆ ಅವಾಚ್ಯ ಪದಗಳಿಂದ ನಿಂದನೆ: ಆರೋಪಿಯ ಬಂಧನ

ಕುಶಾಲನಗರ:ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳಾದ ವಿಜಯಕುಮಾರ್ ಹೊಸಮನಿ, ಕಾಶಿನಾಥ ಜಿ.ಕೆ ಅವರು ಮಡಿಕೇರಿ ನಗರದ ಜಿ.ಟಿ ವೃತ್ತದ ಬಳಿ ಸಂಚಾರಿ ನಿಯಂತ್ರಣದ ಕರ್ತವ್ಯ ನಿರತರಾಗಿದ್ದ ಸಂದರ್ಭ ಕೆಎ-12 ಎಂಸಿ-1753 ವಾಹನವು ಅತಿ ವೇಗದಿಂದ ಬರುತ್ತಿರುವುದನ್ನು ಗಮನಿಸಿ ಪರಿಶೀಲನೆಗಾಗಿ ಕಾರನ್ನು ನಿಲ್ಲಿಸಿದ್ದು ಸದರಿ ಕಾರಿನ ಚಾಲಕನಾದ ಹರೀಶ್ ಬಿ.ಕೆ ಮಧ್ಯಪಾನ ಮಾಡಿರುವುದು ಕಂಡುಬಂದಿರುವುದರಿಂದ ಅಲ್ಕೋಮೀಟರ್ ನಲ್ಲಿ ಪರಿಶೀಲಿಸಲು ಪ್ರಯತ್ನಸಿದಾಗ ಕರ್ತವ್ಯದಲ್ಲಿದ್ದ ಅಧಿಕಾರಿ ಹಾಗೂ ಸಿಬಂದಿಗಳನ್ನು ಅವಾಚ್ಯ ಶಬ್ದಗಳಿಂದ ನಿಂಧಿಸಿ ದೂಡಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಈ ಕುರಿತು .ಸಿ.ವಿ.ಶ್ರೀಧರ್, ಪಿಎಸ್‌ಐ, ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ ಚಾಲಕನಾದ ಹರೀಶ್.ಬಿ.ಕೆ ಎಂಬಾತನ ಮೇಲೆ ಕಾನೂನು ಕ್ರಮ ಕೈಗೊಳ್ಳವಂತೆ ದೂರು  ದಾಖಲಿಸಿದ್ದು ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ.

ಕರ್ತವ್ಯ ನಿರತರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂಧಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಹಾಗೂ ಮದ್ಯಪಾನ ಮಾಡಿ ರಸ್ತೆಯಲ್ಲಿ ವಾಹನ ಚಲಾಯಿಸುವ ಸಂದರ್ಭ ಅಪಘಾತವಾದಲ್ಲಿ ಜೀವಕ್ಕೆ ಹಾನಿಯುಂಟಾಗುವ ಬಗ್ಗೆ ಅರಿವಿದ್ದರೂ ಸಹ ಮಧ್ಯಪಾನ ಮಾಡಿ ಅತೀವೇಗ & ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿರುವ ಮೊಣ್ಣಂಗೇರಿ ಗ್ರಾಮದ ನಿವಾಸಿಯಾದ ಆರೋಪಿ ಹರೀಶ.ಬಿ.ಕೆ, (46 ವರ್ಷ) ಎಂಬಾತನನ್ನು ದಸ್ತಗಿರಿ ಮಾಡಿ ಘನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0