ಚೆನ್ನಯ್ಯನಕೋಟೆ ಸರ್ಕಾರಿ ಶಾಲೆಯ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳ ಸಾಧನೆ

ಚೆನ್ನಯ್ಯನಕೋಟೆ ಸರ್ಕಾರಿ ಶಾಲೆಯ ಸ್ಕೌಟ್ಸ್ & ಗೈಡ್ಸ್ ವಿದ್ಯಾರ್ಥಿಗಳ ಸಾಧನೆ

ಸಿದ್ದಾಪುರ; ಅಮ್ಮತ್ತಿ ಗುಡ್ ಶೆಫರ್ಡ್ ಶಾಲಾ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಚೆನ್ನಯ್ಯನ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಂಡ ಪ್ರತಿಭೆ ಪ್ರದರ್ಶಿಸಿದ್ದಾರೆ.

 ಗೀತ ಗಾಯನ ಸ್ಪರ್ಧೆಯಲ್ಲಿ ಸ್ಕೌಟ್ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದರೆ ಗೈಡ್ಸ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗುಡ್ ಸೆಫೆಡ್ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕಿ ಸಿಸ್ಟರ್ ಎಲಿಜಬೆತ್ ಸ್ಪರ್ಧೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು ಈ ಸಂದರ್ಭ ಗೈಡ್ಸ್ ಶಿಕ್ಷಕಿ ಜಾಜಿ ಬಿ ಬಿ ಸೇರಿದಂತೆ ಮತ್ತಿತರ ಉಪಸಿದ್ದರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಶಾಲೆಯ ವಿದ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕಿ ರಾಜಮ್ಮ ಅಭಿನಂದಿಸಿದ್ದಾರೆ.