ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಪ್ರವೇಶಾತಿ ಆರಂಭ

Apr 9, 2026 - 11:16
 0  79
ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಪ್ರವೇಶಾತಿ ಆರಂಭ

ವಿರಾಜಪೇಟೆ: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರವೇಶಾತಿ ಆರಂಭವಾಗಿದೆ.

 ನರ್ಸರಿಯಿಂದ ಗ್ರೇಡ್ 5 ತರಗತಿವರೆಗೆ ಪ್ರವೇಶಾತಿ ಆರಂಭವಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥೆ ಪೂಜಾ ಸಜೇಶ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಸ್ಥೆಯಲ್ಲಿ ಶಿಕ್ಷಣದ ಜೊತೆಗೆ ಯೋಗ ತರಬೇತಿ, ಸ್ವಿಮ್ಮಿಂಗ್ ತರಬೇತಿ, ಕೀ ಬೋರ್ಡ್, ಕರಾಟೆ, ನೃತ್ಯ ಅಬಾಕಸ್ ತರಬೇತಿ ನೀಡಲಾಗುತ್ತದೆ. ಶಾಲಾ ವಾಹನದ ವ್ಯವಸ್ಥೆ, ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಒಬ್ಬ ಬಡ ವಿದ್ಯಾರ್ಥಿನಿಗೆ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಜೊತೆಗೆ ಶಾಲೆಯಲ್ಲಿ ವಿವಿಧ ಘಟಕಗಳ ಮೂಲಕ ವಿನೂತನ ಕಾರ್ಯಕ್ರಮಗಳನ್ನು ವರ್ಷವಿಡೀ ಹಮ್ಮಿಕೊಳ್ಳಲಾಗುತ್ತದೆ. ನಾಂಗಲ ಗ್ರಾಮದಲ್ಲಿರುವ ಸ್ಥಳದಲ್ಲಿ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಹೊಸ ಕ್ಯಾಂಪಸ್‌ನಲ್ಲಿ ವೈವಿಧ್ಯಮಯ ಸೌಲಭ್ಯಗಳನ್ನು ಒಳಗೊಳ್ಳಲಿದೆ.

ಸಂಸ್ಥೆಯು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು ಶಾಲಾ ಕಚೇರಿ ವೇಳೆಯಲ್ಲಿ ಪೋಷಕರು ಆಗಮಿಸಿ ಪ್ರವೇಶಾತಿಯನ್ನು ಪಡೆಯಬೇಕಾಗಿ ಶಾಲಾ ಪ್ರಕಟಣೆ ಕೋರಿದೆ. ಹೆಚ್ಚಿನ ಮಾಹಿತಿಗಾಗಿ 9847490000 5 8971969457 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0