ಆ.07 ರಂದು ಐಪಣಿರ ಆಯಿಮೆ ಮತ್ತು ಕಳಿ ಪೈಪೋಟಿ
admincoorgdaily
ಮಡಿಕೇರಿ:-ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ನಾಪೋಕ್ಲುವಿನ ನಾಲ್ನಾಡ್ ಸ್ಪೋಟ್ರ್ಸ್ ಮತ್ತು ರಿಕ್ರಿಯೇಷನ್ ಕ್ಲಬ್ ಹಾಗೂ ಕೊಡವ ಸಮಾಜ ರಿಕ್ರಿಯೇಷನ್ ಮತ್ತು ಸ್ಪೋಟ್ರ್ಸ್ ಕ್ಲಬ್ ಸಹಯೋಗದಲ್ಲಿ ಆಗಸ್ಟ್, 7 ರಂದು ಕೊಡವ ಹಾಗೂ ಕೊಡವ ಭಾಷಿಕ ಜನಾಂಗದವರಿಗೆ, ಬಿದ್ದಾಟಂಡ ಓಟ್ ಯಾಕದಲ್ಲಿ ಐಪಣಿರ ಆಯಿಮೆ ಮತ್ತು ಕಳಿ ಪೈಪೋಟಿ ನಡೆಸಲು ತೀರ್ಮಾನಿಸಲಾಗಿದೆ. ಕಾರ್ಯಕ್ರಮದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ಸಾರ್ವಜನಿಕರಿಗೆ ಮತ್ತು ಮಹಿಳೆಯರಿಗೆ ವಿವಿಧ ಪೈಪೋಟಿಗಳನ್ನು ಹಮ್ಮಿಕೊಳ್ಳಲಾಗಿದೆ. ಕೊಡಗಿನ ನಾಟಿ ಕೆಲಸದ ವೇಳೆ ಮೊದಲಿನಿಂದಲೇ ನಡೆದು ಬಂದ ಸಾಂಪ್ರದಾಯಿಕ ಕ್ರೀಡೆಗಳಾದ ನಾಟಿ ಓಟ, ಕೊಡಿನಾಟಿ ಇಡುವುದು, ಉಯ್ಯಾಪಾಟ್, ಪೈಪೋಟಿಗಳು ಇದ್ದು, ಹಗ್ಗ ಜಗ್ಗಾಟ ಮತ್ತು ಇತರ ಕ್ರೀಡೆಗಳನ್ನು ಪ್ರೈಮರಿ, ಹೈಸ್ಕೂಲ್, ಪದವಿಪೂರ್ವ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೈಪೋಟಿ ಇದ್ದು, ಆಯಾಯ ವಯಸ್ಸಿಗೆ ಅನುಗುಣವಾಗಿ ಪೈಪೋಟಿ ವಿಂಗಡಿಸಲಾಗಿದೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಕಾಡೆಮಿಯ ಸದಸ್ಯರಾದ ಪುತ್ತರಿರ ಪಪ್ಪು ತಿಮ್ಮಯ್ಯ, ಚೊಟ್ಟೆಯಂಡ ಎ.ಸಂಜು ಕಾವೇರಪ್ಪ, ಕಂಬೆಯಂಡ ಡೀನಾ ಬೋಜಣ್ಣ ಹಾಗೂ ಮೊಳ್ಳೆಕುಟ್ಟಂಡ ದಿನು ಬೋಜಪ್ಪನವರು ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9901014607 ಅಥವಾ 9742728805 ನ್ನು ಸಂಪರ್ಕಿಸಬಹುದು.