ಏಪ್ರಿಲ್ 02 ರಂದು ಮದ್ಯ ಮಾರಾಟ ನಿಷೇಧ

Apr 1, 2026 - 17:36
 0  1.3k
ಏಪ್ರಿಲ್ 02 ರಂದು ಮದ್ಯ ಮಾರಾಟ ನಿಷೇಧ

ಮಡಿಕೇರಿ;-ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆಯುವ ಹನುಮ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965 ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ಏಪ್ರಿಲ್, 02 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯ ರಾತ್ರಿ 12 ಗಂಟೆಯವರೆಗೆ ವಿರಾಜಪೇಟೆ ನಗರ ಮತ್ತು ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 2
Angry Angry 0
Sad Sad 1
Wow Wow 0