ಮೇ 05ರಂದು ಮದ್ಯ ಮಾರಾಟ ನಿಷೇಧ
admincoorgdaily

ಮಡಿಕೇರಿ ಏ.30:-ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ನಡೆಯುವ ನಾಥಂಗಲ್ ಶ್ರೀ ಕಾಳಿ ದೇವರ ಜಾತ್ರೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಮೇ, 05 ರಂದು ಬೆಳಗ್ಗೆ 6 ಗಂಟೆಯಿಂದ ಮೇ, 06 ರ ಸಂಜೆ 6 ಗಂಟೆಯವರೆಗೆ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸುತ್ತಮುತ್ತಲಿನ 1 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.