ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ನ. 14 ರಿಂದ ಅಖಿಲ ಭಾರತ ಸಹಕಾರ ಸಪ್ತಾಹ

ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ನ. 14 ರಿಂದ ಅಖಿಲ ಭಾರತ ಸಹಕಾರ ಸಪ್ತಾಹ

ಮಡಿಕೇರಿ: ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ವತಿಯಿಂದ ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹ ನ.೧೪ ರಿಂದ ೨೦ರವರೆಗೆ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಡೆಯಲಿದೆ ಎಂದು ಯೂನಿಯನ್‌ನ ಅಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ತಿಳಿಸಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಮತ್ತು ಸ್ಥಳೀಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ನಡೆಯಲಿದ್ದು, ನ.೧೪ರಂದು ಪೆರಾಜೆ ಫ್ಯಾಕ್ಸ್‌ನಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ನ.೧೫ರಂದು ಪಾಲಿಬೆಟ್ಟ ಫ್ಯಾಕ್ಸ್, ನ.೧೬ರಂದು ಸುಂಟಿಕೊಪ್ಪ ಫ್ಯಾಕ್ಸ್, ನ.೧೭ರಂದು ಸೋಮವಾರಪೇಟೆ ಫ್ಯಾಕ್ಸ್, ನ.೧೮ರಂದು ಕಾನೂರು ಫ್ಯಾಕ್ಸ್, ನ.೧೯ರಂದು ದೇವಣಗೇರಿ ಫ್ಯಾಕ್ಸ್‌ನಲ್ಲಿ ನಡೆಯಲಿದೆ ಎಂದು ತಿಳಿಸಿದರು. ನ.೨೦ರಂದು ಸಹಕಾರ ಸಪ್ತಾಹ ದಿನಾಚರಣೆ ಮತ್ತು ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಉನ್ನತಿ ಭವನದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ ೧೦.೩೦ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ತನ್ನ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಕೊಡಂದೇರ.ಪಿ.ಗಣಪತಿ ನೆರವೇರಿಸಲಿದ್ದಾರೆ. ಶಾಸಕಧ್ವಯರು, ಎಂಎಲ್‌ಸಿ, ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಕೊಡಗು ಸಹಕಾರ ರತ್ನ ಪ್ರಶಸ್ತಿಯನ್ನು ಚಿರಿಯಪಂಡ.ಕೆ.ಉತ್ತಪ್ಪ, ಎಚ್.ಎಸ್.ಮುದ್ದಪ್ಪ ಮತ್ತು ತಳೂರು.ಎ.ಕಿಶೋರ್ ಕುಮಾರ್ ಅವರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ, ದೇವಾಂಬಿಕ ಮಹೇಶ್‌ಗೆ ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ ಮತ್ತು ಉತ್ತಮ ಸಹಕಾರಿ ಸಿಬ್ಬಂದಿ ಪ್ರಶಸ್ತಿಯನ್ನು ಆಲೆಮಾಡ ಕಾವೇರಮ್ಮ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್, ನಿರ್ದೇಶಕರಾದ ಬಲ್ಲಾರಂಡ ಮಣಿಉತ್ತಪ್ಪ, ವಿ.ಸಿ.ಅಮೃತ್, ಎಂ.ಟಿ.ಸುಬ್ಬಯ್ಯ, ಎಂ.ಎಂ.ಶ್ಯಾಮಲ ಉಪಸ್ಥಿತರಿದ್ದರು.