ಮತಗಳ್ಳತನ ಆರೋಪ:ಆಗಸ್ಟ್ 05 ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು:ನಮ್ಮ ಮತದಾರರ ಹಕ್ಕು, ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವದ ಉಳಿವಿಗಾಗಿ ಆಗಸ್ಟ್ 5ರಂದು ಮತ ಕಳ್ಳತನದ ವಿರುದ್ಧ ಹೋರಾಟ ನಡೆಸಲು ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ನಿಟ್ಟಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಪ್ರತಿಭಟನೆ ನಡೆಯುವ ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿ,ಡಿಸಿಎಂ ಡಿಕೆ ಶಿವಕುಮಾರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ