ಅಮ್ಮತ್ತಿ: ಡಿ.28ರಂದು ಕೊಡಗು ಫುಟ್ಬಾಲ್ ತಂಡಕ್ಕೆ ಆಯ್ಕೆ ಪ್ರಕ್ರಿಯೆ

Dec 26, 2025 - 21:14
Dec 27, 2025 - 10:55
 0  206
ಅಮ್ಮತ್ತಿ: ಡಿ.28ರಂದು ಕೊಡಗು ಫುಟ್ಬಾಲ್ ತಂಡಕ್ಕೆ ಆಯ್ಕೆ ಪ್ರಕ್ರಿಯೆ

ಮಡಿಕೇರಿ,ಡಿ.26: ಬೆಂಗಳೂರು ಮತ್ತು ತುಮಕೂರುನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಕೊಡಗು ಜಿಲ್ಲೆಯ ತಂಡವನ್ನು ಆಯ್ಕೆ ಮಾಡುವ ಪ್ರಕ್ರಿಯೇ ಇದೆ ತಿಂಗಳು ಡಿಸೆಂಬರ್ 28 ರ ಭಾನುವಾರ ಅಮ್ಮತ್ತಿಯಲ್ಲಿ ನಡೆಯಲಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ ಪುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಪಿ.ಎ.ನಾಗೇಶ್ ಅವರು ಈ ಆಯ್ಕೆಯ ಪ್ರಕ್ರಿಯೇಯು ಅಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿ ನಡೆಯಲಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಆಟಗಾರರು ಪೂರ್ಣ ಪುಟ್ಬಾಲ್ ಕಿಟ್ ಆಧಾ‌ರ್ ಮೂಲಪ್ರತಿ ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಒಂದು ಪಾಸ್‌ಪೋರ್ಟ್ ಸೈಜಿನ ಭಾವಚಿತ್ರವನ್ನು ಹೊಂದಿಕೊಂಡು ಭಾನುವಾರ ಬೆಳಿಗ್ಗೆ 10 ಗಂಟೆಗೆ ಹಾಜರಾಗಬೇಕೆಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9481058256 ಇವರನ್ನು ಸಂಪರ್ಕಿಸಲು ಕೋರಲಾಗಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0