ನಾಪೋಕ್ಲು; ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಅನೀಮಿಯ ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣೆ

Jan 28, 2026 - 13:21
 0  148
ನಾಪೋಕ್ಲು; ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ  ಅನೀಮಿಯ ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲುವಿನ ಅಂಗನವಾಡಿ ಕೇಂದ್ರದಲ್ಲಿ ನಾಪೋಕ್ಲು ಪಟ್ಟಣ, ಕೋಟೇರಿ, ಮುಟೇರಿ, ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಆಯೋಜಿಸಲಾದ ಅನೀಮಿಯ ಕಾರ್ಯಗಾರ ಹಾಗೂ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

 ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ರವರು ಪಾಲ್ಗೊಂಡು ಮಾತನಾಡಿ ಮಕ್ಕಳಿಗೆ ಉತ್ತಮ ಪೌಷ್ಟಿಕ ಆಹಾರ ನೀಡುವುದರ ಜೊತೆಗೆ ಪೋಷಕರು ತಮ್ಮ ಮಕ್ಕಳನ್ನು ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳಿಗೆ ಕರೆತಂದು ತೂಕ ಎತ್ತರ ವನ್ನು ಪರಿಶೀಲಿಸಬೇಕು.ಅದರಂತೆ ಮಾತೃವಂಧನ, ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳು ಸರಿಯಾದ ದಾಖಲೆಗಳನ್ನು ನೀಡಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಮಾಹಿತಿ ನೀಡಿದರು.

 ಮಕ್ಕಳ ವೈದ್ಯರಾದ ಡಾ. ಚೈತ್ರ ಹಾಗೂ ಡಾ. ಪವನ್ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರಾದ ಶ್ವೇತ, ಗೀತಾ, ಕೃತಿಕಾ, ಸಹಾಯಕಿಯರಾದ ಸರೋಜಾ, ಪಾರ್ವತಿ ಪೋಷಕರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0