State News

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ

admincoorgdaily

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕಾಂಗ್ರೆಸ್ ಮುಖಂಡನ ವಿರುದ್ಧ ಪ್ರಕರಣ

ಬೆಂಗಳೂರು, ಡಿ. 20: ಬಡವರ ಆಹಾರ ಭದ್ರತೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ್ದಾನೆ ಎಂಬ ಆರೋಪದ ಮೇಲೆ ಯಲಚೇನಹಳ್ಳಿಯ ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಶಪಡಿಸಿಕೊಂಡ ಟೆಂಪೋದಲ್ಲಿ 45 ಚೀಲ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ಬಹಿರಂಗಪಡಿಸಿದವರ ವಿರುದ್ಧ ಬೆದರಿಕೆ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಅಂಶವನ್ನೂ ತನಿಖೆಗೆ ಒಳಪಡಿಸಲಾಗಿದೆ. 

ಯಲಚೇನಹಳ್ಳಿ ಹಾಗೂ ಇಲಿಯಾಸ್ ನಗರ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ರಾಜಕೀಯ ಸಂಘರ್ಷ ತೀವ್ರಗೊಂಡಿದ್ದು, ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟದ ಜಾಲದ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.