ಚೆನ್ನಂಗಿ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ

Dec 29, 2025 - 09:20
 0  298
ಚೆನ್ನಂಗಿ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ
ಸಾಧಕರಿಗೆ ಸನ್ಮಾನ

ಸಿದ್ದಾಪುರ: ಚೆನ್ನಂಗಿ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ ಸಂಭ್ರಮ ವಿವಿಧ ಸಾಂಸ್ಕೃತಿಕ, ಆರೋಗ್ಯ,ಪರಿಸರ ಕಾಳಜಿ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಸೇರಿದಂತೆ ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ ನೆರವೇರಿತು.

ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲೂಕು ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಡಂಚಿನ ಗ್ರಾಮೀಣ ಭಾಗದ ಸರ್ಕಾರಿ ಶಾಲೆಯಾದರೂ ಖಾಸಗಿ ಶಾಲೆಯಂತೆ ಎಲ್ಲಾ ವ್ಯವಸ್ಥೆಯು ಶಾಲೆಯಲ್ಲಿದ್ದು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರೊಂದಿಗೆ ಪ್ರತಿಭಾನ್ವಿತರಾಗಿ ಸಮಾಜದ ಮುಖ್ಯ ವಾಹಿನಿಗೆ ತರಲು ಶಿಕ್ಷಕರು ಶ್ರಮಿಸುತ್ತಿರುವುದು ಶ್ಲಾಘನೆಯ ಎಂದರು ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದು ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಕರೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮುಕೊಂಡ ವಿಜು ಸುಬ್ರಮಣಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ದೇಶದ ಆಚಾರ ವಿಚಾರ ಸಂಸ್ಕೃತಿ ಪರಂಪರೆಯ ಸಂದೇಶ ಸಾರುವ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಂಡಿರುವುದು ಸಂತೋಷದ ವಿಷಯವಾಗಿದೆ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಸಾಮಾಜಿಕ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು ಶಿಕ್ಷಕರುಗಳ ಸಾಮಾಜಿಕ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರುಕ್ಮಿಣಿ ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಪೋಷಕರ ಸಹಕಾರ ಅತ್ಯಗತ್ಯವಾಗಿದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಈ ಸರ್ಕಾರಿ ಶಾಲೆಯಲ್ಲಿ ಮಾಡುತ್ತಿದ್ದು ಈ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಪದವಿಯೊಂದಿಗೆ ಹುದ್ದೆಗಳನ್ನು ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ಕಲಿಕೆಯ ಮೂಲಕ ಪ್ರತಿಭಾನ್ವಿತರಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದರು.

 ಸಮಾಜ ಸೇವಕ ವಕೀಲ ವಿಜು ಉತ್ತಪ್ಪ ಮಾತನಾಡಿ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಯೊಂದಿ ಸಾಧಿಸುವ ಚಲದೊಂದಿಗೆ ಉನ್ನತ ಶಿಕ್ಷಣದ ಮೂಲಕ ಪ್ರತಿಭಾನ್ವಿತರಾಗಿ ಗುರುತಿಸಿಕೊಂಡಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದೆ ತಪ್ಪದೆ ಶಾಲೆಗೆ ಹಾಜರಾಗುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮಾತನಾಡಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆಂದು ಹೇಳಿದ ಅವರು ಅಪರಾಧ ತಡೆ ಮಸಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಮಾದಕ ವಸ್ತುಗಳ ಮಾರಾಟ ಸೇವನೆಗಳ ಬಗ್ಗೆ ಇಲಾಖೆಗೆ ಮಾಹಿತಿ ನೀಡಿ ಬಾಲ್ಯ ವಿವಾಹ, ಪೋಕ್ಸೋ ಸೇರಿದಂತೆ ಇತರ ಕಾಯ್ದೆ ಗಳ ಬಗ್ಗೆ ಅರಿವು ಜಾಗೃತಿ ಮೂಡಿಸಿದರು.

ಈ ಸಂದರ್ಭ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷೆ ಈಶ್ವರಿ, ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಸಿದ್ದಪ್ಪ,ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಕೆ ಕೆ ಸುಷಾ, ಸಹ ಶಿಕ್ಷಕಿಯರಾದ ಮಂಜುಳಾ, ಪ್ರತಿಮಾ, ಕಲಾವಿದ ರವಿ ಸೇರಿದಂತೆ ಮತ್ತಿತರ ಉಪಸ್ಥಿತರಿದ್ದರು. ವಾರ್ಷಿಕೋತ್ಸವ ಅಂಗವಾಗಿ ನಡೆದ ವಿದ್ಯಾರ್ಥಿಗಳ ಸಾಂಸ್ಕೃತಿಕ ನೃತ್ಯ ಪ್ರದರ್ಶನ ನೆರೆದಿದ್ದ ಪೋಷಕರ ಗಮನ ಸೆಳೆದರು. ಇದೇ ಸಂದರ್ಭ ಶಾಲಾ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಲೆಯ ಹಳೆ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು ಪೋಷಕರು, ವಿದ್ಯಾರ್ಥಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0