Kodagu

ಆಗಸ್ಟ್ 09ರಂದು ಅಖಿಲ‌ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆ

admincoorgdaily

ಆಗಸ್ಟ್ 09ರಂದು ಅಖಿಲ‌ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆ

ಮಡಿಕೇರಿ: ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಆ.೯ರ ಭಾನುವಾರ ಅ.ಕ ಮಾಜಿ ಸೈನಿಕರ ಸಂಘದ ಕೊಡಗು ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆ ಜರುಗಲಿದೆ ಎಂದು ಜಿಲ್ಲಾಧ್ಯಕ್ಷ ಎಸ್.ಸುಧೀರ್ ತಿಳಿಸಿದರು.

ಬೆಳಗ್ಗೆ ೧೦ಕ್ಕೆ ಆರಂಭವಾಗುವ ಸಭೆಗೆ ಜಿಲ್ಲಾಧಿಕಾರಿ ಸೋಮಶೇಖರ್, ಎಸ್ಪಿ ಬಿಂದುಮಣಿ, ಜಿಲ್ಲೆಯ ಐದು ತಾಲೂಕಿನ ತಹಶೀಲ್ದಾರರು, ಸೈನಿಕ ಕಲ್ಯಾಣ ಮಂಡಳಿ ಅಧಿಕಾರಿಗಳು ಆಗಮಿಸಲಿದ್ದಾರೆ. ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಉನ್ನತ ಅಂಕ ಪಡೆದ ೧೧ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಾಧಕರನ್ನೂ ಸನ್ಮಾನಿಸಲಾಗುವುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ಲವ, ಭವಾನಿ, ಕುಟ್ಟಪ್ಪ, ಸೋಮಯ್ಯ, ವಿಜಯ್ ಕುಮಾರ್ ಉಪಸ್ಥಿತರಿದ್ದರು.