ಮಾಲಂಬಿ ದೇವರುಗಳ ವಾರ್ಷಿಕ ಪೂಜಾ ಮಹೋತ್ಸವ ಸಂಪನ್ನ
admincoorgdaily

ಶನಿವಾರಸಂತೆ:-ಸಮೀಪದ ಮಾಲಂಬಿ ಗ್ರಾಮದ ದೇವರುಗಳ ಸೇವಾ ಸಮಿತಿಯಿಂದ ನಡೆದ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಬಸವಣ್ಣ ಸ್ವಾಮಿ, ಶ್ರೀ ಕನ್ನಂಬಾಡಿ ಅಮ್ಮನವರ ವಾರ್ಷಿಕ ಪೂಜಾ ಮಹೋತ್ಸವವು ಮಂಗಳವಾರ ಬೆಳಗ್ಗೆ ಸಂಪನ್ನಗೊಂಡಿತ್ತು.
ದೇವರುಗಳ ವಾರ್ಷಿಕ ಪೂಜಾ ಮಹೋತ್ಸವ ಸೋಮವಾರ ಬೆಳಗ್ಗೆ ಗ್ರಾಮದ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ಭಕ್ತಾಧಿಗಳು ಮತ್ತು ಗ್ರಾಮಸ್ಥರು ಗ್ರಾಮದ ಮಳೆ ಮಲ್ಲೇಶ್ವರ ಬೆಟ್ಟವನ್ನೇರಿ ಬೆಟ್ಟದ ಮೇಲಿರುವ ಶ್ರೀ ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು ಸೋಮವಾರ ಸಂಜೆ 6 ಅರ್ಚಕರು ದೇವಸ್ಥಾನದಲ್ಲಿ ಪೂಜೆ, ಮಹಾಮಂಗಳಾರತಿಯೊಂದಿಗೆ ಕದಲಿ ಪೂಜೆ ನೆರವೇರಿಸಿದರು.
ತದನಂತರ ಪ್ರಸಾದ ವಿನಿಯೋಗ ನಡೆದ ಬಳಿಕ ಆರತಿಯೊಂದಿಗೆ ಉತ್ಸವವು ವಾದ್ಯಗೋಷ್ಠಿ, ಮಹಿಳೆಯರು ಕುಂಭ ಕಳಸ ಸಮೇತವಾಗಿ ಗಂಗಾಸ್ನಾನಕ್ಕೆ ತೆರಳಿದ ಬಳಿಕ ವಾಪಾಸಾಗಿ ದೇವಸ್ಥಾನವನ್ನು ಪ್ರವೇಶಿಸಿತ್ತು. ನಂತರ ರಾತ್ರಿ ಇಡಿ ದೇವರುಗಳ ಉತ್ಸವವು ಅಡ್ಡಪಲ್ಲಕ್ಕಿ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಜರುಗಿತ್ತು.
ಈ ಸಂದರ್ಭ ಭಕ್ತಾದಿಗಳಿಗೆ ದೇವಸ್ಥಾನ ಸಮಿತಿಯಿಂದ ಅನ್ನಸಂತರ್ಪಣೆ ನಡೆಯಿತು ಮಂಗಳವಾರ ಬೆಳಗ್ಗೆ 7 ಗಂಟೆಗೆ ಶ್ರೀ ಕನ್ನಂಬಾಡಿ ಅಮ್ಮನವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು ಈ ಸಂದರ್ಭ ಭಕ್ತಾದಿಗಳು ದೇವಸ್ಥಾನದಲ್ಲಿ ಹಣ್ಣು ಕಾಯಿ ಪೂಜೆ ಸಲ್ಲಿಸಿದರು ಮಹಾಮಂಗಳಾರತಿ ಪ್ರಸಾದ ವಿನಿಯೋಗದೊಂದಿಗೆ ಗ್ರಾಮದ ದೇವರುಗಳು ಪೂಜಾ ಮಹೋತ್ಸವ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಯಿಂದ ಗ್ರಾಮದ ಪರಿವಾರ ದೇವರುಗಳಿಗೆ ಪೂಜೆ ಸಲ್ಲಿಸಲಾಯಿತು.