ಶ್ರದ್ಧಾಭಕ್ತಿಯಿಂದ ನಡೆದ ಶ್ರೀ ಬನಶಂಕರಿ ಅಮ್ಮನವರ ವಾರ್ಷಿಕ ಮಹೋತ್ಸವ
admincoorgdaily

ಶನಿವಾರಸಂತೆ::-ಸಮೀಪದ ಗೋಪಾಲಪುರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ಅಮ್ಮನವರ 28ನೇ ವರ್ಷದ ವಾರ್ಷಿಕ ಪೂಜಾ ಮಹೋತ್ಸವವು ಮಂಗಳವಾರ ಶ್ರದ್ದಾಭಕ್ತಿಯಿಂದ ನಡೆಯಿತು.
ಶ್ರೀ ಬನಶಂಕರಿ ಅಮ್ಮನವರ ದೇವಸ್ಥಾನ ಸಮಿತಿ ಮತ್ತು ದೇವಾಂಗ ಸಂಘದ ವತಿಯಿಂದ ನಡೆಸುತ್ತಿರುವ ದೇವಸ್ಥಾನದ 28ನೇ ವಾಷಿಕೋತ್ಸವ ಮತ್ತು ಪೂಜಾ ಮಹೋತ್ಸವವು ಮಂಗಳವಾರ ಮುಂಜಾನೆಯಿಂದ ಪ್ರಾರಂಭಗೊಂಡಿತು. ಮಂಗಳವಾರ ಬೆಳಗ್ಗೆ 8 ಗಂಟೆಗೆ ದೇವಸ್ಥಾನದಲ್ಲಿ ಅರ್ಚಕರು ಶ್ರೀ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಶ್ರೀ ಸೂಕ್ತ, ದುರ್ಗಾಸೂಕ್ತ, ದೇವಿಸೂಕ್ತಗಳಿಂದ ಅಭಿಷೇಕ ನೆರವೇರಿಸಲಾಯಿತು.
ಬೆಳಗ್ಗೆ 9 ಗಂಟೆಗೆ ಗಣಪತಿ ಪೂಜೆ, ಪುಣ್ಯಾಹ, ಋತ್ವಿಕ್‌ವರ್ಣ, ಕಲಶಾರಾಧನೆ ಬಳಿಕ 10 ಗಂಟೆಗೆಗಣಪತಿ ಹೋಮ, ನವಗ್ರಹ ಹೋಮ, ದುರ್ಗಾಹೋಮ ಹಾಗೂ ಮೃತ್ಯುಂಜಯ ಹೋಮ ನೆರವೇರಿಸಿದ ಬಳಿಕ ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿಯ ನಂತರ ಮಧ್ಯಾಹ್ನ 12-30 ರಿಂದ ಮಹಾಮಂಗಳಾರತಿ ಮತ್ತು ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು.
ಸಂಜೆ 4 ಗಂಟೆಗೆ ಶ್ರೀ ಬನಶಂಕರಿ ಅಮ್ಮನವರ ಉತ್ಸವ ಮೂರ್ತಿಯನ್ನುವಾದ್ಯಗೋಷ್ಠಿ, ವೀರಗಾಸೆ ಕುಣಿತದೊಂದಿಗೆ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಪೂಜಾ ಮಹೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. ಮಧ್ಯಾಹ್ನ ಭಕ್ತಾಧಿಗಳಿಗೆ ದೇವಸ್ಥಾನ ಸಮೀತಿಯಿಂದ ಅನ್ನಸಂತರ್ಪಣೆ ನಡೆಯಿತು.