ಕದನೂರಿನ ಆದಿ ಮುತ್ತಪ್ಪ ದೇವಾಲಯದ ವಾರ್ಷಿಕ ತೆರೆ ಮಹೋತ್ಸವ

Mar 6, 2026 - 15:44
 0  240
ಕದನೂರಿನ ಆದಿ ಮುತ್ತಪ್ಪ ದೇವಾಲಯದ ವಾರ್ಷಿಕ ತೆರೆ ಮಹೋತ್ಸವ

ವಿರಾಜಪೇಟೆ:ಕೊಡಗು ಜಿಲ್ಲೆಯಲ್ಲಿ ಪ್ರಥಮವಾಗಿ ಸ್ಥಾಪನೆಯಾಗಿದ್ದ ವಿರಾಜಪೇಟೆ ತಾಲೂಕಿನ ಕದನೂರು ಗ್ರಾಮದಲ್ಲಿ ನೆಲೆಕಂಡಿರುವ ಸುಮಾರು 400 ವರ್ಷಗಳ ಇತಿಹಾಸವಿರುವ ಮಠಪುರ ಆದಿ ಮುತ್ತಪ್ಪ ದೇವಾಲಯದ ವಾರ್ಷಿಕ ತೆರೆ ಮಹೋತ್ಸವವು ಶ್ರಧ್ದಾ ಭಕ್ತಿಯಿಂದ ನಡೆಯಿತು.

 ವಾರ್ಷಿಕ ತೆರೆ ಮಹೋತ್ಸವದ ಅಂಗವಾಗಿ ದೇಗುಲದಲ್ಲಿ ಮುಂಜಾನೆ ಗಣಪತಿಹೋಮದೋಂದಿಗೆ ಆರಂಭವಾದ ವಾರ್ಷಿಕ ಮಹೋತ್ಸವವು ಧ್ವಜರೋಹಣ, ಪೈಂಗುತ್ತಿ ಸಂಜೆ ವೇಳೆ 7 ಗಂಟೆಗೆ ಮುತ್ತಪ್ಪನ್ ವೆಳ್ಳಾಟಂ, ಮತ್ತು ಗುಳಿಗ ವೆಳ್ಳಾಟಂ ನಡೆಯಿತು. ನೆರೆದ ಭಕ್ತಾಧಿಗಳಿಗೆ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಅನ್ನಸಂತರ್ಪಣೆ ನಡೆಯಿತು.

ವಾರ್ಷಿಕ ತೆರೆ ಮಹೋತ್ಸವದಲ್ಲಿ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಉತ್ಸವ ಸಮಿತಿಯ ಸದಸ್ಯರು, ಕದನೂರು ಗ್ರಾಮದ ಗ್ರಾಮಸ್ಥರು ಸೇರಿದಂತೆ, ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಸಾವಿರಕ್ಕೂ ಅಧಿಕ ಮಂದಿ ತೆರೆ ಮಹೋತ್ಸವದಲ್ಲಿ ಭಾಗಿಗಳಾಗಿ ದೇವರ ಕೃಪೆಗೆ ಪಾತ್ರರಾದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0