ಕೊಡಗು ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಶಾಸಕ ಡಾ.ಮಂತರ್ ಗೌಡ ಅವರ ಮತ್ತೊಂದು ಕೊಡುಗೆ: ಕೊಡಗು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ರೋಬೇಟಿಕ್ ಸರ್ಜರಿ ಪ್ರಾರಂಭಿಸಲು ಉಪಕರಣ ಖರೀದಿಸಲು ನಿರ್ಧಾರ‌

ಕೊಡಗು ಜಿಲ್ಲೆಯ ಆರೋಗ್ಯ ಕ್ಷೇತ್ರಕ್ಕೆ ಶಾಸಕ ಡಾ.ಮಂತರ್ ಗೌಡ ಅವರ ಮತ್ತೊಂದು ಕೊಡುಗೆ: ಕೊಡಗು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ರೋಬೇಟಿಕ್ ಸರ್ಜರಿ ಪ್ರಾರಂಭಿಸಲು ಉಪಕರಣ ಖರೀದಿಸಲು ನಿರ್ಧಾರ‌

ಬೆಂಗಳೂರು: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ 16ನೇ ಆಡಳಿತ ಮಂಡಳಿ ಸಭೆ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ, ಕೊಡಗು ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ರೋಬೇಟಿಕ್ ಸರ್ಜರಿ ಪ್ರಾರಂಭಿಸಲು ಉಪಕರಣ ಖರೀದಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

 ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ ಪಾಟೀಲ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ. ಮಂಥರ್ ಗೌಡ ರವರು ಪಾಲ್ಗೊಂಡು ಸಂಸ್ಥೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು. ಆರ್ಥೋಪೆಡಿಕ್ಸ್ ವಿಭಾಗದಲ್ಲಿ ರೋಬೊಟಿಕ್ ಸರ್ಜರಿ ಪ್ರಾರಂಭಿಸಲು ಉಪಕರಣ ಖರೀದಿಗೆ ನಿರ್ಧಾರ ಮಾಡಲಾಗಿದೆ.ಸ್ತನ ಕ್ಯಾನ್ಸರ್ ತಡೆಯುವ ನಿಟ್ಟಿನಲ್ಲಿ ಪರೀಕ್ಷೆ ನಡೆಸಲು ಮ್ಯಾಮೋಗ್ರಾಪಿ ಖರೀದಿ,ಕಟ್ಟಡ ಕಾಮಗಾರಿ ಪ್ರಗತಿ ಪರಿಶೀಲಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಖಾಲಿ ಇರುವ ವೈದ್ಯರ ಹುದ್ದೆಯನ್ನು ನೇರ ನೇಮಕಾತಿ ಮುಖೇನ ಭರ್ತಿ ಮಾಡಿಕೊಳ್ಳಲು ತೀರ್ಮಾನ ಸೇರಿದಂತೆ ಸಂಸ್ಥೆಯ ಅಭಿವೃದ್ಧಿ ಬಗ್ಗೆ ಸುಧೀರ್ಘವಾಗಿ ಚರ್ಚಿಸಲಾಯಿತು.

ಡಾ. ಮಂತರ್ ಗೌಡ ರವರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಅಭಿವೃದ್ಧಿ ಬಗ್ಗೆ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಮೊಹಮ್ಮದ್ ಮೊಹಿಸಿನ್, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಾದ ಡಾ. ವಿಶಾಲ್ ಆರ್. ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಡಾ ಸುಜಾತ ರಾಥೋಡ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ ನಿರ್ದೇಶಕರು ಹಾಗೂ ಡೀನ್ ಡಾ .ಲೋಕೇಶ್ ಎ.ಜೆ, ವೈದ್ಯಕೀಯ ಅಧೀಕ್ಷಕರಾದ ಡಾ. ಸೋಮಶೇಖರ್ , ಆಕುಕ ಕಾರ್ಯಪಾಲಕ ಅಭಿಯಂತರರಾದ ಜಗದೀಶ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.