ಶಾಂತಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು ಕಾರ್ಯಕ್ರಮ

ಶಾಂತಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಹಾಗೂ  ಸಾಂಕ್ರಾಮಿಕ ರೋಗಗಳ ಕುರಿತು  ಆರೋಗ್ಯ ಅರಿವು ಕಾರ್ಯಕ್ರಮ

ಸೋಮವಾರಪೇಟೆ:ಪ್ರಾಥಮಿಕ ಆರೋಗ್ಯ ಕೇಂದ್ರ ಶಾಂತಳ್ಳಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಳ್ಳಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ವಿರೋಧ ಮಾಸಾಚರಣೆ ಕಾರ್ಯಕ್ರಮವನ್ನು ಹಾಗೂ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು ಕಾರ್ಯಕ್ರಮವನ್ನು ನಡೆಸ ಲಾಯಿತು. ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗಳಾದ ವಿಶ್ವಜ್ಞಾ ರವರು ಮಾತನಾಡುತ್ತಾ ಡೆಂಗ್ಯೂ ಹಾಗೂ ಮಲೇರಿಯಾ ಜ್ವರ ಶೀಘ್ರ ವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆ ಯನ್ನು ನೀಡುವುದರ ಮೂಲಕ ಗುಣಪಡಿಸಬಹುದು ಎಂದು ತಿಳಿಸಿದರು. ಡೆಂಗ್ಯೂ ಜ್ವರ ಹಾಗೂ ಮಲೇರಿಯಾ ಜ್ವರದ ಲಕ್ಷಣಗಳ ಬಗ್ಗೆ ಮತ್ತು ಚಿಕಿತ್ಸೆ ಯ ಬಗ್ಗೆ ಸೊಳ್ಳೆಗಳ ಜೀವನ ಚಕ್ರದ ಬಗ್ಗೆ ಹಾಗೂ ಮಲೇರಿಯ ಜ್ವರದ ಬಗ್ಗೆ, ಚಿಕೂನ್ ಗುನ್ಯಾ ಜ್ವರದ ಬಗ್ಗೆ ತಿಳಿಸಿದರು. ಹಾಗೂ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ , ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಶಾಂತಳ್ಳಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಪ್ರವೀಣ್ ಕುಮಾರ್ ರವರು ಮಾತನಾಡುತ್ತಾ ವಿಶ್ವ ಜನಸಂಖ್ಯಾ ದಿನಾಚರಣೆಯ ಮಹತ್ವದ ಬಗ್ಗೆ, ಹಾಗೂ ಪರಿಸರ ಸ್ವಚ್ಛತೆಯ ಬಗ್ಗೆ, ನೀರಿನ ಶುಚಿತ್ವದ ಬಗ್ಗೆ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಆರೋಗ್ಯ ಶಿಕ್ಷಣದ ಕುರಿತು ಮಾಹಿತಿಯನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪರಮೇಶ್ವರ ಸ್ವಾಮಿ ಹಾಗೂ ಸಹಶಿಕ್ಷಕರಾದ ಜಯಮ್ಮ ಸಂತೋಷ್ ಮತ್ತು ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು , ಮತ್ತು ಕೇಂದ್ರದ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಅರ್ಪಿತಾ, ಸಮುದಾಯ ಆರೋಗ್ಯ ಅಧಿಕಾರಿಗಳಾದ ರಮ್ಯ, ಆಶಾ ಕಾರ್ಯಕರ್ತೆಯವರಾದ ವಿಶಾಲಾಕ್ಷಿ ರವರು ಹಾಜರಿದ್ದರು.