ಸುಂದರನಗರ ಸ್ಮಶಾನ ಅಭಿವೃದ್ಧಿಗೆ ಆಗ್ರಹಿಸಿ ಶಾಸಕರಿಗೆ ಮನವಿ

Jul 22, 2026 - 16:13
 0  69
ಸುಂದರನಗರ ಸ್ಮಶಾನ ಅಭಿವೃದ್ಧಿಗೆ ಆಗ್ರಹಿಸಿ ಶಾಸಕರಿಗೆ ಮನವಿ

ಕುಶಾಲನಗರ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರ ಸ್ಮಶಾನ ಅಭಿವೃದ್ಧಿಗೆ ಅನುದಾನ‌ ನೀಡುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಬಿ.ಶಂಶುದ್ಧೀನ್ ಅವರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿದರು. ‌ ಕುಶಾಲನಗರದ‌ ಶಾಸಕರ ಕಚೇರಿಯಲ್ಲಿ ಮನವಿ ಸಲ್ಲಿಸಿದ ಕೆ.ಬಿ.ಶಂಶುದ್ಧೀನ್, ಸುಂದರನಗರ ಸ್ಮಶಾನದ ಅಭಿವೃದ್ಧಿಗೆ ಶಾಸಕರ ಅನುದಾನ ನೀಡುವಂತೆ ಮನವಿ ಮಾಡಿದರು‌. ಇದಕ್ಕೆ ಸ್ಪಂದಿಸಿದ ಶಾಸಕರು, ಸ್ಮಶಾನ ಅಭಿವೃದ್ಧಿಗೆ‌ ಅನುದಾನ ನೀಡುವುದಾಗಿ ಭರವಸೆ ನೀಡಿದರು.

 ಈ ಸಂದರ್ಭ ಮಾತನಾಡಿದ ಗ್ರಾ.ಪಂ ಮಾಜಿ ಸದಸ್ಯ ಕೆ.ಬಿ.ಶಂಶುದ್ಧೀನ್, ಸುಂದರನಗರ ಸ್ಮಶಾನ ಅಭಿವೃದ್ಧಿಗಾಗಿ ಶಾಸಕರ ಬಳಿ ಮನವಿ ಮಾಡಲಾಗಿದೆ. ಶಾಸಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಬೇಗನೇ ಅನುದಾನ ನೀಡುವುದಾಗಿ ತಿಳಿಸಿದರು. ಹಾಗೆಯೇ ಸುಂದರನಗರ ಸರ್ಕಲ್ ನಲ್ಲಿ ದಿ.ಗುಂಡೂರಾವ್ ಅವರ ಪ್ರತಿಮೆ ನಿರ್ಮಾಣದ ಕೆಲಸವೂ ಆಗಲಿದೆ ಎಂದು ಭರವಸೆ ನೀಡಿದ್ದಾರೆ ಎಂದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0