ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮೀಕ್ಷೆ ಕಾರ್ಯಕ್ಕೆ ಸಹಕರಿಸಲು ಮನವಿ

ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮೀಕ್ಷೆ ಕಾರ್ಯಕ್ಕೆ ಸಹಕರಿಸಲು ಮನವಿ

ಮಡಿಕೇರಿ:-ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರಿಗೆ ಪ್ರಥಮ ಬಾರಿ ರಾಜ್ಯಾಂದ್ಯಂತ ಸರ್ಕಾರದ ಆದೇಶನ್ವಯ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಸಮೀಕ್ಷೆಯನ್ನು ಏರ್ಪಡಿಸಲಾಗಿದೆ. ಸಮೀಕ್ಷೆ ಕಾರ್ಯವು ಸುಲಲಿತವಾಗಿ ನಡೆಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಈಗಾಗಲೇ ರಚನೆಯಾಗಿರುತ್ತದೆ.

ಲಿಂಗತ್ವ ಅಲ್ಪಸಂಖ್ಯಾತ ಅವರನ್ನು ಮುಖ್ಯವಾಹಿನಿಗೆ ತರಲು, ಉದ್ಯೋಗ, ಶಿಕ್ಷಣ, ಮೀಸಲಾತಿ ಒದಗಿಸುವುದು, ಸಮುದಾಯದ ಜನಸಂಖ್ಯೆ, ಶೈಕ್ಷಣಿಕ ಮಟ್ಟ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಮಾಹಿತಿಯನ್ನು ಕ್ರೋಢಿಕರಿಸಿ ಸಮುದಾಯದವರೆಗೆ ಅಗತ್ಯ ಸೌಲಭ್ಯಗಳನ್ನು ನೀಡುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ. 15 ಸೆಪ್ಟಂಬರ್ 2025 ರಿಂದ 45 ದಿನಗಳ ಕಾಲ ಲಿಂಗತ್ವ ಅಲ್ಪಸಂಖ್ಯಾತ ಸಮೀಕ್ಷೆ ನಡೆಸಲು ದಿನಾಂಕ ನಿಗಧಿಯಾಗಿ ಡಿಎಫ್‍ಡಿಯು ಸಮೀಕ್ಷೆ ನಡೆಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಳ ನಿಗಧಿಯಾಗಿರುತ್ತದೆ.

 ಸಮುದಾಯ ಆಧಾರಿತ 05 ಸಮೀಕ್ಷೆದಾರರಿಗೆ ಸಮೀಕ್ಷೆ ನಡೆಸಲು ತರಬೇತಿ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಲಿಂಗತ್ವ ಅಲ್ಪಸಂಖ್ಯಾತ ಸರ್ವೆಗೆ ಸಂಬಂಧಿಸಿದಂತೆ ಸಮುದಾಯ ಆಧಾರಿತ ಪಯಣ ಸಂಸ್ಥೆಯವರೊಂದಿಗೆ ಚರ್ಚಿಸಿ ಟ್ರಾನ್ಸ್‍ಜೆಂಡರ್ ಸರ್ವೆಯನ್ನು ಪರಿಣಾಮಕಾರಿಯಾಗಿ ಹೆಚ್ಚಿನ ಪ್ರಚಾರ ನೀಡಿ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಅದರಂತೆ ಹೆಚ್ಚಿನ ಸಂಖ್ಯೆಯಲ್ಲಿ ಈ ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಮೂಲ ಹಂತದ ಸರ್ವೆಯಲ್ಲಿ ಭಾಗವಹಿಸಿ ಸಹಕರಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-298379, 9482194105 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.