ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
ಮಡಿಕೇರಿ:-ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಆಸಕ್ತ ಮಹಿಳಾ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ಪ್ರೋತ್ಸಾಹ, ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮುಂತಾದ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು. ಆಸಕ್ತ್ತ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದೆ. ಭಾಗವಹಿಸುವವರು ಕನಿಷ್ಠ 21 ವರ್ಷಗಳ ವಯಸ್ಸಿನವರಾಗಿರಬೇಕು.
ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್, 08 ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ದೂ.ಸಂ. 7760145784, 8310738819 ಈ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ ಅಥವಾ ಕರೆ ಮೂಲಕ ಹೆಸರು ನೋಂದಾವಣೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ದೂ.ಸಂ. 7760145784, 8310738819 ನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಸಂಸ್ಥೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.