ರಾಜ್ಯ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಜ್ಯ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ:-ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಡಿಸೆಂಬರ್, 03 ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಸಂಸ್ಥೆಗಳಿಗೆ, ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕ ಪ್ರಶಸ್ತಿಗಳನ್ನು ರಾಜ್ಯ ಮಟ್ಟದಲ್ಲಿ ನೀಡಲಾಗುತ್ತಿದೆ. ಈ ಪ್ರಯುಕ್ತ 2025ನೇ ಸಾಲಿನಲ್ಲೂ ಸಹ ಪ್ರಶಸ್ತಿಗಳನ್ನು ನೀಡಲು ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್, 10 ರೊಳಗೆ ದ್ವಿಪ್ರತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08272–295829 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.