ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾಗಿ ಕರ್ತವ್ಯ ನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನ
ಮಡಿಕೇರಿ -ಕರ್ನಾಟಕ ರಾಜ್ಯದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಯಲ್ಲಿ ಪಿಎಂಎಪ್‍ಎಂಇ ಯೋಜನೆಯ ಮಹತ್ವವನ್ನು ಮನಗಂಡು ಮುಖ್ಯಮಂತ್ರಿ ಅವರು 2025-26 ನೇ ಸಾಲಿಗೆ 5000 ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪಿಸುವ ಘೋಷಣೆಯನ್ನು ಆಯವ್ಯಯ ಭಾಷಣದಲ್ಲಿ ಪ್ರಕಟಿಸಿದ್ದಾರೆ. ಈ ಗುರಿ ಸಾಧಿಸಲು ಇನ್ನೂ ಹೆಚ್ಚಿನ ಸಂಖ್ಯೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ಅವಶ್ಯಕತೆ ಇದೆ. ಆದ್ದರಿಂದ, ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾಗಿ ಕರ್ತವ್ಯ ನಿರ್ವಹಿಸಲು ಆಸಕ್ತಿಯಿರುವ ಅರ್ಹತೆಗಳನ್ನು ಹೊಂದಿರುವ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ಅಥವಾ ಡಿಪ್ಲೋಮಾ ಹೊಂದಿರಬೇಕು. ಸಾಮಾನ್ಯ ಕಂಪ್ಯೂಟರ್ ಜ್ಞಾನ (MS Office, Internet, e-Mail, Typing in English and Kannada, etc., ಇರಬೇಕು, ಆಹಾರ ಸಂಸ್ಕರಣೆಯಲ್ಲಿ ಹಾಗೂ ಬ್ಯಾಂಕಿಂಗ್ ಕ್ಷೇತ್ರ್ರದಲ್ಲಿ ಅನುಭವ ಇರಬೇಕು. ನಿವೃತ್ತಿ ಹೊಂದಿದ ಬ್ಯಾಂಕ್ ಮ್ಯಾನೇಜರ್ ಅಥವಾ ಇತರೆ ಸಿಬ್ಬಂದಿಗಳು ಅತ್ಯಂತ ಸೂಕ್ತರಿರುತ್ತಾರೆ. ಈ ಮೇಲಿನ ಅರ್ಹತೆಗಳನ್ನು ಹೊಂದಿರುವ, ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾಗಲು ಬಯಸುವ ಹೊಸ ಅಭ್ಯರ್ಥಿಗಳು https://forms.gle/kN7z5t4earHUZhFy9 ಲಿಂಕ್ ಮೂಲಕ ಆಗಸ್ಟ್, 30 ರೊಳಗೆ ಅರ್ಜಿ ಸಲ್ಲಿಸುವುದು. ಹಿಂದಿನ ಸಾಲಿನಲ್ಲಿ ಡಿಆರ್‍ಪಿ ತರಬೇತಿ ಪಡೆದುಕೊಂಡು ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ನೇರವಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಮಡಿಕೇರಿ ಇಲ್ಲಿಗೆ ಕೆಲಸದ ಅವಧಿಯಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಲು ಕೋರಿದೆ. ಹೆಸರು ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳಿಗೆ ತರಬೇತಿ ಆಯೋಜಿಸಲು ಕೆಪೆಕ್ವತಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.