Kodagu

ಸಮಗ್ರ ನಾಗರಿಕ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

admincoorgdaily

ಸಮಗ್ರ ನಾಗರಿಕ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ ಜು.02:-ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 26 ಗ್ರಾಮ ಪಂಚಾಯತ್‍ಗಳಲ್ಲಿ ‘ಸಮಗ್ರ ನಾಗರಿಕ ಸೇವಾ ಕೇಂದ್ರ/ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ, ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ, ಮಡಿಕೇರಿ ತಾಲ್ಲೂಕಿನ ಮಕ್ಕಂದೂರು, ಬಲ್ಲಮಾವಟಿ, ಹಾಕತ್ತೂರು, ಮರಗೋಡು, ಭಾಗಮಂಡಲ, ನರಿಯಂದಡ, ಬೆಟ್ಟಗೇರಿ, ಪೊನ್ನಂಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು, ದೇವರಪುರ, ಬಾಳೆಲೆ, ತಿತಿಮತಿ, ಕುಟ್ಟ, ಟಿ.ಶೆಟ್ಟಿಗೇರಿ, ಹುದಿಕೇರಿ, ದೊಡ್ಡಮಳ್ತೆ, ಬೆಸ್ಸೂರು, ಗೌಡಳ್ಳಿ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ, ಕದನೂರು, ಚೆಂಬೆಬೆಳ್ಳೂರು ಮತ್ತು ಚೆನ್ನಯ್ಯನಕೋಟೆ ಇಲ್ಲಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಈ ಲಿಂಕ್‍ನ ಮೂಲಕ ಅರ್ಜಿ ಸಲ್ಲಿಸಲು ಜುಲೈ, 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಎ-ಮೇಲ್ ಐಡಿ: care@blsinternational.net ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಅವರು ತಿಳಿಸಿದ್ದಾರೆ.