ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಯನ್ನು ಆಯೋಜಿಸಲು ಕೊಡಗು ಜಿಲ್ಲೆಯಲ್ಲಿ ಆಸಕ್ತಿ ಹೊಂದಿರುವ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಮಡಿಕೇರಿ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ತಮ್ಮ 2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಘೋಷಿಸಿರುತ್ತಾರೆ. ಅದರಂತೆ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಯನ್ನು ಆಯೋಜಿಸಲು ಕೊಡಗು ಜಿಲ್ಲೆಯಲ್ಲಿ ಆಸಕ್ತಿ ಹೊಂದಿರುವ ಸಂಘ ಸಂಸ್ಥೆಗಳು ಒಂದು ವಾರದ ಒಳಗೆ ಅರ್ಜಿ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗೆ ದೂ.ಸಂ.9480032712 ಅಥವಾ 08272-220986 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.